ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ 30 ವರ್ಷದ ವ್ಯಕ್ತಿಗೆ ಮಿದುಳು ನಿಷ್ಕ್ರಿಯಗೊಂಡಿದ್ದ 13 ತಿಂಗಳ ಮಗುವಿನ ಮೂತ್ರಪಿಂಡಗಳನ್ನು ಫೋರ್ಟಿಸ್ ಆಸ್ಪತ್ರೆ ವೈದ್ಯರು ಕಸಿ ಮಾಡಿದ್ದಾರೆ.
‘ರೋಬೋಟಿಕ್ ಎನ್-ಬ್ಲಾಕ್’ ವಿಧಾನದ ಮೂಲಕ ಕಸಿ ಮಾಡಲಾಗಿದೆ. ಉಸಿರುಗಟ್ಟಿ ಮೃತಪಟ್ಟ ಮಗುವಿನ ಅಂಗಾಂಗ ದಾನಕ್ಕೆ ಪೋಷಕರು ಸಮ್ಮತಿ ಸೂಚಿಸಿದ್ದರು. ಮಗು 7. 3 ಕೆ. ಜಿ. ತೂಕ ಹೊಂದಿತ್ತು. ಎರಡು ಮೂತ್ರಪಿಂಡಗಳನ್ನು 50 ಕೆ. ಜಿ. ತೂಕವುಳ್ಳ ವ್ಯಕ್ತಿಗೆ ಕಸಿ ಮಾಡಲಾಗಿದೆ. ಅವರು ದೀರ್ಘಕಾಲದಿಂದ ಮೂತ್ರಪಿಂಡದ ವೈಫಲ್ಯಕ್ಕೆ ಒಳಗಾಗಿ, ಹಿಮೋಡಯಾಲಿಸಿಸ್ ಮಾಡಿಕೊಳ್ಳುತ್ತಿದ್ದರು. ಇದರಿಂದಾಗಿ ಮೂತ್ರಪಿಂಡದ ಕಸಿ ಅನಿವಾರ್ಯವಾಗಿತ್ತು.
ರೋಬೋಟಿಕ್ ಎನ್-ಬ್ಲಾಕ್ ವಿಧಾನದ ಕಸಿಯಿಂದ ವ್ಯಕ್ತಿಯ ತೂಕಕ್ಕೆ ಅನುಗುಣವಾಗಿ ಮೂತ್ರಪಿಂಡಗಳ ಗಾತ್ರ ಹೆಚ್ಚಿಸಲು ಸಾಧ್ಯವಾಗುತ್ತದೆ. ನಾಲ್ಕು ಗಂಟೆಯ ಅವಧಿಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈ ಸಂಕೀರ್ಣ ಶಸ್ತ್ರಚಿಕಿತ್ಸೆಯ ನಂತರ, ರೋಗಿಯನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ, ಆರೈಕೆ ಮಾಡಲಾಯಿತು. 12 ದಿನಗಳ ಬಳಿಕ ಅವರನ್ನು ಮನೆಗೆ ಕಳುಹಿಸಲಾಗಿದೆ’ ಎಂದು ಡಾ. ಕೇಶವಮೂರ್ತಿ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy