ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ಹಿನ್ನೆಲೆಯಲ್ಲಿ ನಡೆಸಲಾಗಿದ್ದ ನಗರ ವ್ಯಾಪ್ತಿಯಲ್ಲಿನ ಕೆಲವು ವಿಧಾನಸಭೆ ಕ್ಷೇತ್ರಗಳ ವಾರ್ಡ್ ಮರು ವಿಂಗಡಣೆಯಲ್ಲಿ ಸಣ್ಣಪುಟ್ಟ ಲೋಪದೋಷಗಳಿವೆ. ಅವುಗಳನ್ನು ಸರಿಪಡಿಸಿದ ನಂತರವೇ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.
ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಮಾಡಿ ಹಿಂದಿನ ಬಿಜೆಪಿನೇತೃತ್ವದ ರಾಜ್ಯ ಸರ್ಕಾರವು 2022ರ ಜುಲೈ 14ರಂದುಹೊರಡಿಸಿದ್ದ ಅಧಿಸೂಚನೆಯನ್ನು ಎತ್ತಿಹಿಡಿದಿದ್ದ ಏಕಸದಸ್ಯನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮಾಜಿ ಮೇಯರ್ ಬಿ. ಎನ್. ಮಂಜುನಾಥ ರೆಡ್ಡಿ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ನೇತೃತ್ವದ ವಿಭಾಗೀಯನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


