ಕಾಂಗ್ರೆಸ್ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿದ ನಂತರ ಕಾರ್ಯಕರ್ತರು ಹುಮ್ಮಸದಲ್ಲಿ ಇದ್ದಾರೆ. ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಯಾವಾಗ ನಿಗಮ ಮಂಡಳಿಗಳನ್ನು ನೀಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಕಾರ್ಯಕರ್ತರಿದ್ದಾರೆ. ಈಗಾಗಲೇ ತಮಗೆ ಇಚ್ಛೆ ಇರುವ ನಿಗಮಗಳ ಮೇಲೆ ಕಣ್ಣಿಟ್ಟಿರುವ ಕಾರ್ಯಕರ್ತರು, ನಾಯಕರುಗಳು ಹಾಗೂ ಸಚಿವರುಗಳು ಎದುರು ತಮ್ಮ ಆಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ.
ಬೆಳಗಾವಿ ನಗರ ಅಭಿವೃದ್ಧಿ ಪ್ರಾಧಿಕಾರ (ಬೂಡಾ )ನಿಗಮ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನ ಹಿರಿಯ ಹಾಗೂ ಸಮುದಾಯದ ಮುಖಂಡರಾದ ಮಲ್ಲೇಶ್ ಜೋಗುಲೆ ಅವರ ಬೆಂಬಲಿಗರು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ
ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರು ಹಾಗೂ ಅವರ ಬೆಂಬಲರಿಗೆ ಮನವಿಯನ್ನು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ದಲಿತ ಸಂಘರ್ಷ ರಾಜ್ಯ ಸಂಚಾಲಕರು ಮಾತನಾಡುತ್ತಾ ಉನ್ನತ ಹುದ್ದೆಗಳ ದಲಿತ ಸಮುದಾಯಕ್ಕೆ ಇಲ್ಲಿವರೆಗೂ ಸಿಕ್ಕಿಲ್ಲ ಈಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವುದರಿಂದ ಮಲ್ಲೇಶ್ ಜೋಗುಲೆ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ನಾವು ನಮ್ಮ ಸಮುದಾಯದ ಹಾಗೂ ಸಂಘಟನೆಗಳ ಪರವಾಗಿ ಸರ್ಕಾರಕ್ಕೆ ಹಾಗೂ ಸಚಿವರ ಗಳಿಗೆ ಒತ್ತಾಯ ಮಾಡುತ್ತೇವೆ ಎಂದರು. ಈ ಸಂದರ್ಭದಲ್ಲಿ ದಲಿತ್ ಪರ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


