ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ಇಂದಿನಿಂದ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ
ವ್ಯವಸ್ಥೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಗೆ ನೋಂದಾಯಿಸಲು ಸೇವಾಸಿಂಧು ವೆಬ್ ಸೈಟ್ ನಲ್ಲಿ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ.
ಕರ್ನಾಟಕ ಒನ್, ಗ್ರಾಮ ಒನ್, ವಿದ್ಯುತ್ ಚ್ಛಕ್ತ ಕಚೇರಿಗಳು, ಗ್ರಾಮ ಪಂಚಾಯಿತಿಗಳು ಹಾಗೂ ನಾಡಕಚೇರಿಗಳಲ್ಲಿ ನೋಂದಣಿ ಮಾಡಲಾಗುವುದು. ಈ ಕೇಂದ್ರಗಳಲ್ಲಿ ನೋಂದಣಿಗೆ ಹೊಸ ಲಿಂಕ್ ಕೂಡ ನೀಡಲಾಗಿದೆ.
ಜೂನ್. 18ರಂದು ಗೃಹ ಜ್ಯೋತಿಗಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಸಿದಾಗ ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಕೆಗೆ ಸಾಧ್ಯವಾಗಿರಲಿಲ್ಲ. ಬೆಂಗಳೂರು ಒನ್, ಕರ್ನಾಟಕ ಒನ್, ಹಾಗೂ ಗ್ರಾಮ ಒನ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಜನರು ಕ್ಯೂ ನಿಂತೂ ನಿಂತು ಬೇಸತ್ತಿದ್ದರು. ಮೊದಲ ದಿನ ಕೇವಲ 55 ಸಾವಿರಕ್ಕೂ ಹೆಚ್ಚು ಅರ್ಜಿಗಳು ಮಾತ್ರ ಸಲ್ಲಿಕೆಯಾಗಿತ್ತು. ಆ ನಂತ್ರ ಸರ್ವರ್ ಸಮಸ್ಯೆ ಸರಿಪಡಿಸಿದ ಕಾರಣ ಹೆಚ್ಚೆಚ್ಚು ಜನರು ಅರ್ಜಿ ಸಲ್ಲಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


