nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

    February 24, 2026

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ
    • ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು
    • ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ
    • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
    • ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರ್ಜಿಗಳ ತ್ವರಿತ ವಿಲೇವಾರಿಗೆ ಸಂಸದ ಈರಣ್ಣ ಕಡಾಡಿ ಸೂಚನೆ
    ರಾಜ್ಯ ಸುದ್ದಿ June 23, 2023

    ಅರ್ಜಿಗಳ ತ್ವರಿತ ವಿಲೇವಾರಿಗೆ ಸಂಸದ ಈರಣ್ಣ ಕಡಾಡಿ ಸೂಚನೆ

    By adminJune 23, 2023No Comments3 Mins Read
    eeranna kadadi

    ಜನಸಾಮಾನ್ಯರು, ವಿದ್ಯಾವಂತ ನಿರುದ್ಯೋಗಿಗಳು, ಮಹಿಳಾ ಸ್ವ-ಸಹಾಯ ಸಂಘಗಳು ಹಾಗೂ ಕೃಷಿಕರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸರ್ಕಾರ ನೂರಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆಗಳ ಅನುಷ್ಠಾನ ವಿಳಂಬವಾಗುತ್ತಿವೆ. ಆದಕಾರಣ ಬಾಕಿಯಿರುವ ಎಲ್ಲ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಬೇಕು ಎಂದು ಸಂಸದ ಈರಣ್ಣ ಕಡಾಡಿ ಅವರು ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

    ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ (ಜೂ.22) ನಡೆದ ವಿವಿಧ ಬ್ಯಾಂಕ್ ಅಧಿಕಾರಿಗಳ ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ಸಮೀಕ್ಷೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸುಮಾರು 16 ಗ್ರಾಮಗಳಲ್ಲಿ ಹೊಸ ಬ್ಯಾಂಕ್ ಶಾಖೆ ತೆರೆಯುವ ಕುರಿತು ಸಾರ್ವಜನಿಕರಿಂದ ಮನವಿಗಳು ಬಂದಿದ್ದು, ಈ ಬಗ್ಗೆ ಹಲವಾರು ಬಾರಿ ಚರ್ಚಿಸಿಲಾಗಿದೆ. ಆದರೆ ಈವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಕೂಡಲೇ ಹೊಸ ಶಾಖೆಗಳ ಪ್ರಾರಂಭಕ್ಕೆ ಕ್ರಮ ವಹಿಸಲು ಸೂಚಿಸಿದರು.


    Provided by
    Provided by

    ಗ್ರಾಮೀಣ ಪ್ರದೇಶದ ಜನರ ಮನೆಬಾಗಿಲಿಗೆ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇವುಗಳ ಬಗ್ಗೆ ಕಳೆದ ಬಾರಿ ಸಭೆ ನಡೆಸಿ, ಸೂಚನೆ ನೀಡಿದರೂ ಒಂದು ಅರ್ಜಿಯೂ ವಿಲೇವಾರಿ ಆಗಿಲ್ಲ. ಅರ್ಹರಿಗೆ ಸೌಲಭ್ಯ ನೀಡಲು ವಿಳಂಬ ಧೋರಣೆ ಬಿಟ್ಟು ಶೀಘ್ರ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಬೇಕು’ ಎಂದು ತಾಕೀತು ಮಾಡಿದರು.

    ಸರ್ಕಾರದ ವಿವಿಧ ಯೋಜನೆಗಳ ಅನುಷ್ಟಾನಕ್ಕೆ ಬ್ಯಾಂಕ್ ಗಳ ಪಾತ್ರ ಮಹತ್ವದಾಗಿದೆ. ಹಾಗಾಗಿ ಬ್ಯಾಂಕ್ ಅಧಿಕಾರಿಗಳು ಸಭೆಗೆ ಸಂಬಂಧಿಸಿದ ದಾಖಲೆ ಹಾಗೂ ಮಾಹಿತಿಗಳನ್ನು ಕಡ್ಡಾಯವಾಗಿ ತರಬೇಕು. ಯಾವುದೇ ನೆಪ ಹೇಳದೆ ಹೊಸ ಶಾಖೆ ಪ್ರಾರಂಭಿಸುವ ಕುರಿತು ನಿಗದಿತ ಅವಧಿಯಲ್ಲಿ ಮಾಹಿತಿ ಸಲ್ಲಿಸಬೇಕು ಎಂದು ತಿಳಿಸಿದರು.

    ಕೃಷಿ, ಶಿಕ್ಷಣ, ಸ್ವಯಂ ಉದ್ಯೋಗ, ಗೃಹ ಸಾಲ ಹಾಗೂ ಸ್ವ ಸಹಾಯ ಸಂಘಗಳ ಸಾಲ ಸೇರಿದಂತೆ ಬ್ಯಾಂಕ್ ಗಳಿಗೆ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಅವಶ್ಯಕ ದಾಖಲೆಗಳನ್ನು ಪರಿಶೀಲಿಸಿ, ಕೂಡಲೇ ಸಾಲ ಮಂಜೂರು ಮಾಡಲು ಸೂಚಿಸಬೇಕು. ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕೆ ಕ್ರಮ ವಹಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಗ್ರಾಮೀಣ ಪ್ರದೇಶದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳು ಸಾರ್ವಜನಿಕರ ಅನುಕೂಲಕ್ಕೆ ಕಾರ್ಯ ನಿರ್ವಹಿಸಬೇಕು. ಬ್ಯಾಂಕ್ ಗ್ರಾಹಕರಿಗೆ ತೊಂದರೆಯಾಗುವ ನಿಟ್ಟಿನಲ್ಲಿ ಬ್ಯಾಂಕ್ ಸಿಬ್ಬಂದಿಗಳು ಕೆಲಸ ಮಾಡುತ್ತಿರುವ ಪ್ರಕರಣಗಳ ಕಂಡುಬಂದಿವೆ. ಕೂಡಲೇ ಸಂಬಂಧಿತ ಬ್ಯಾಂಕ್ ಶಾಖೆಯ ಅಧಿಕಾರಿಗಳು ಸಿಬ್ಬಂದಿಗಳಿಗೆ ತಿಳಿಹೇಳಬೇಕು ಎಂದು ಸೂಚಿಸಿದರು.

    ಅವಶ್ಯವಿರುವ ವಿವಿಧ ಗ್ರಾಮಗಳಲ್ಲಿ ಹೊಸ ಬ್ಯಾಂಕ್ ಶಾಖೆ ತೆರೆಯುವ ಕುರಿತು ಕಳೆದ ಮಾರ್ಚ್ ನಲ್ಲಿ ನಡೆದ ಸಭೆಯಲ್ಲಿ ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಈವರೆಗೆ ಯಾವುದೇ ಶಾಖೆಗಳು ಪ್ರಾರಂಭವಾಗಿಲ್ಲ. ಕೂಡಲೇ ಹೊಸ ಶಾಖೆಗಳ ಪ್ರಾರಂಭಕ್ಕೆ ಕ್ರಮ ವಹಿಸಬೇಕು ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಹೇಳಿದರು.

    ಯುವಕ- ಯುವತಿಯರಿಗೆ ಸ್ವ-ಉದ್ಯೋಗ ತರಬೇತಿ: ಆರ್.ಸಿಟಿ ಕೆನರಾ ಬ್ಯಾಂಕ್  ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಈಗಾಗಲೇ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಗ್ರಾಮೀಣ ಭಾಗದ ಯುವಕ ಯುವತಿಯರಿಗೆ ಹೈನುಗಾರಿಕೆ, ಕುರಿ ಸಾಕಾಣಿಕೆ, ಬ್ಯೂಟಿ ಪಾರ್ಲರ್, ಸೇರಿದಂತೆ ವಿವಿಧ ವೃತ್ತಿಪರ ತರಬೇತಿಗಳನ್ನು ನೀಡಲಾಗುತ್ತದೆ.

    ಈಗಾಗಲೇ ನಿಗದಿಪಡಿಸಿದ ಗುರಿಗಿಂತ ಹೆಚ್ಚು ಪ್ರಮಾಣದ ಗುರಿ ಸಾಧಿಸಲಾಗಿದೆ ಎಂದು ಕೆನರಾ ಬ್ಯಾಂಕ್ ಆರ್.ಸಿಟಿ ನಿರ್ದೇಶಕರಾದ ಸಿದ್ದನಗೌಡ ಅವರು ವಿವರಿಸಿದರು.

    ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಸ್ವ ಉದ್ಯೋಗ ಕಾರ್ಯಕ್ರಮಗಳ ಅನುಷ್ಟಾನಕ್ಕೆ ಜಿಲ್ಲೆಯ ಎಲ್ಲ ಭಾಗಗಳಲ್ಲಿ ತರಬೇತಿ ನೀಡುವ ಕುರಿತು ಯೋಜನೆ ರೂಪಿಸಬೇಕು. ತರಬೇತಿ ಕಾರ್ಯಗಾರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜನರಿಗೆ ತಲುಪಲು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.

    ಅದೇ ರೀತಿಯಲ್ಲಿ ಗ್ರಾಮದ ಜನರಿಗೆ ಸರ್ಕಾರಿ ಯೋಜನೆಗಳ ವಿಮೆ ಮಾಡಿಸಲು ಈಗಾಗಲೇ ಬ್ಯಾಂಕ್ ಗಳಿಗೆ ನಿರ್ದೇಶನ ನೀಡಲಾಗಿದೆ. ಬ್ಯಾಂಕ್ ಸಿಬ್ಬಂದಿಯು ಕನ್ನಡ ಬಳಕೆಗೆ ಹೆಚ್ಚು ಒತ್ತು ನೀಡಬೇಕು.

    ಗ್ರಾಹಕರೊಂದಿಗೆ ಕಡ್ಡಾಯವಾಗಿ ಕನ್ನಡ ಭಾಷೆ ಮಾತನಾಡಬೇಕು. ಅರ್ಜಿ ನಮೂನೆ, ಮಾಹಿತಿ ಫಲಕಗಳು ಸೇರಿದಂತೆ ಪತ್ರ ವ್ಯವಹಾರಗಳನ್ನು ಕನ್ನಡಲ್ಲೇ ನಡೆಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕರಾದ ಗಂಗಾಧರ ಅವರು ತಿಳಿಸಿದರು.

    ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ ಕುಲಕರ್ಣಿ, ನಬಾರ್ಡ್ ಡಿಡಿಎಂ ಭಾರದ್ವಾಜ, ಡಿಸಿಸಿ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಕಲಾವಂತ, ಕೆನರಾ ಬ್ಯಾಂಕ್ ಮ್ಯಾನೇಜರ್ ಸಂಜೀವ ವನಜೇರಿ ಹಾಗೂ ವಿವಿಧ ಬ್ಯಾಂಕ್ ಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ

    February 23, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

    February 24, 2026

    ಬೀದರ್: ಜಿಲ್ಲೆಯ ವರ್ಷದ ಮೊದಲ ಮಳೆ ಸೋಮವಾರ ಬೀದರ್‌ ನಗರ ಸೇರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ತುಂತುರಿನಿಂದ ಸುರಿಯಿತು. ಬೀದರ್‌…

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.