ಐಫೋನ್ ತಯಾರಿಸುವ ವಿಸ್ಟಾನ್ ಕಂಪನಿಗೆ ರಾಜ್ಯ ಮಟ್ಟದ ಪರಿಸರ ಪರಿಣಾಮ ನಿರ್ವಹಣಾ ಪ್ರಾಧಿಕಾರವು(ಎಸ್‌ಇಐಎಎ) 1.6 ಕೋಟಿ ರೂ. ದಂಡ ವಿಧಿಸಿದೆ. ಕಂಪನಿಯು ದಂಡದ ಮೊತ್ತವನ್ನು ಪಾವತಿಸಿದೆ.
ತೈವಾನ್ ದೇಶದ ಐಫೋನ್ ತಯಾರಿಕಾ ಕಂಪನಿಗಳಲ್ಲಿ ಒಂದಾಗಿರುವ ವಿಸ್ಮಾನ್, ಬೆಂಗಳೂರಿನಲ್ಲಿ 650 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಿದೆ. ಕಳೆದ ಕೆಲವು ವರ್ಷಗಳಿಂದ ಉತ್ಪಾದನೆ ಸಾಮರ್ಥ್ಯವನ್ನು ದುಪ್ಪಟ್ಟುಗೊಳಿಸಿದೆ. ದೊಡ್ಡ ಮೊತ್ತವನ್ನು ನಗರದಲ್ಲಿ ಹೂಡಿಕೆ ಮಾಡಿದ್ದರೂ ಪರಿಸರ ಇಲಾಖೆಯಿಂದ ನಿರಾಪೇಕ್ಷಣಾ ಪತ್ರ (ಎನ್‌ಸಿ) ಪಡೆದುಕೊಂಡಿರಲಿಲ್ಲ. ಹೀಗಾಗಿ ದಂಡ ವಿಧಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ವಿಸ್ಮಾನ್ ಕಂಪನಿಯನ್ನು ಟಾಟಾ ಗ್ರೂಪ್ ನವರು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ವೇಳೆ ಎನ್‌ಒಸಿ ಪಡೆದುಕೊಳ್ಳದೇ ಉತ್ಪಾದನೆ ನಡೆಸುತ್ತಿರುವುದು ಬೆಳಕಿಗೆ ಬಂದಿತ್ತು. ಕಂಪನಿಯು ಮೇ 2023ರಲ್ಲಿ ದಂಡವನ್ನು ಪಾವತಿಸಿದೆ ಎಂದು ಮೂಲಗಳು ಹೇಳಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


