ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಉದ್ದೇಶಿಸಲಾಗಿದೆ’ ಎಂದು ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ ತಿಳಿಸಿದರು.
ಕೆಎಂಎಫ್ ಕಚೇರಿಯಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿ- ಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಎಲ್ಲ ಹಾಲು ಒಕ್ಕೂಟಗಳು ಹಾಲಿನ ದರವನ್ನು ಹೆಚ್ಚಿಸುವಂತೆ ಬಹುದಿನಗಳಿಂದ ಒತ್ತಾಯಿಸುತ್ತಿವೆ. ಈ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳ- ಲಾಗುವುದು’ ಎಂದರು. ರೈತರು ನೀಡುವ ಹಾಲಿಗೆ ಮುಂದಿನ ದಿನಗಳಲ್ಲಿ ಖಾಸಗಿಗಿಂತ ಹೆಚ್ಚಿನ ದರ ನೀಡುತ್ತೇವೆ ಎಂದು ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಸುಗಳಿಗೆ ಚರ್ಮಗಂಟು ರೋಗ ಬಂದ ನಂತರ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಕುಸಿದಿತ್ತು. ಈಗ ಪರಿಸ್ಥಿತಿ ಸುಧಾರಿಸಿದ್ದು, ಹಾಲಿನ ಉತ್ಪಾದನೆ ಹೆಚ್ಚುತ್ತಿದೆ ಎಂದರು. ಎಸ್ಎಎನ್ಎಫ್ ಮಾನದಂಡಕ್ಕೆ ಅನುಗುಣವಾಗಿ ಇಲ್ಲದ ಹಾಲನ್ನು ಖಾಸಗಿ ಡೇರಿಯವರು ಖರೀದಿಸುತ್ತಿದ್ದಾರೆ. ರೈತರಿಗೆ ಮುಂದಿನ ದಿನಗಳಲ್ಲಿ ಖಾಸಗಿಯವರಿಗಿಂತ ಹೆಚ್ಚಿನ ದರ ಕೊಡುತ್ತೇವೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


