ರಾಜ್ಯದಲ್ಲಿ ಅಧಿಕಾರ ಹಿಡಿದ ಬಳಿಕ, ಉಪ-ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಬಿಜೆಪಿಯ ಒಬ್ಬೊಬ್ಬ ನಾಯಕರನ್ನು ಪರಿಗಣನೆಗೆ ತೆಗೆದುಕೊಂಡು ಉನ್ನತ ಹುದ್ದೆ ಸಂಪಾದಿಸಲು ಅಣಿಯಾಗುತ್ತಿದ್ದಾರೆ.
ಇತ್ತೀಚೆಗಷ್ಟೇ ಉಪ-ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಡಿ. ಕೆ. ಶಿವಕುಮಾರ್ ಕಳೆದ ಕೆಲ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಬಿ. ಎಸ್. ಯಡಿಯೂರಪ್ಪರನ್ನು ಭೇಟಿಯಾಗಿದ್ದರು.
ಇದೀಗ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಗೆ ಸಮಯ ನಿಗದಿಪಡಿಸಿಕೊಂಡಿದ್ದಾರೆ.
ಇಂದು ಸಂಜೆ 6 ಘಂಟೆಗೆ ಬಸವರಾಜ ಬೊಮ್ಮಾಯಿ ಅವರ ಖಾಸಗಿ ನಿವಾಸ ಆರ್‌ಟಿನಗರಕ್ಕೆ ಉಪ-ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿ ನೀಡಲಿದ್ದು, ಸೌಹಾರ್ದಯುತವಾಗಿ ಭೇಟಿಯಾಗಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


