nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

    February 24, 2026

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ
    • ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು
    • ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ
    • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
    • ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಗತ್ಯ ವಸ್ತುಗಳ ಬೆಲೆ ಏರಿಕೆ; ತಿಂಡಿ ತಿನಿಸುಗಳ ದರ ಹೆಚ್ಚಳ ಅನಿವಾರ್ಯ
    ರಾಜ್ಯ ಸುದ್ದಿ June 23, 2023

    ಅಗತ್ಯ ವಸ್ತುಗಳ ಬೆಲೆ ಏರಿಕೆ; ತಿಂಡಿ ತಿನಿಸುಗಳ ದರ ಹೆಚ್ಚಳ ಅನಿವಾರ್ಯ

    By adminJune 23, 2023No Comments2 Mins Read
    bengaluru

    ಹಾಲು, ಗ್ಯಾಸ್, ವಿದ್ಯುತ್ ದರ ಸೇರಿ ಎಲ್ಲ ದಿನಬಳಕೆ ವಸ್ತುಗಳ ಬೆಲೆಯಲ್ಲಿ ಹೆಚ್ಚಳ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕಾಫಿ, ಟೀ, ತಿಂಡಿ, ಊಟದ ದರವನ್ನು ಹೆಚ್ಚಳ ಮಾಡಲಾಗುವುದು ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ ಸಿ ರಾವ್ ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಒಂದು ಕಡೆ ವಿದ್ಯುತ್ ದರ ಹೆಚ್ಚಳವಾಗಿದೆ. ಹಾಲಿನ ದರ ಹೆಚ್ಚಳದ ಬಗ್ಗೆ ಕೆಎಂಎಫ್ ನೂತನ ಅಧ್ಯಕ್ಷ ಭೀಮಾನಾಯ್ಕ ನಿರ್ಧರಿಸಿದ್ದಾರೆ. ಅಲ್ಲದೆ ಹೋಟೆಲ್‌ ನಲ್ಲಿ ಉಪಯೋಗಿಸುವ ಗ್ಯಾಸ್, ತರಕಾರಿ, ಬೇಳೆ ಸೇರಿದಂತೆ ಎಲ್ಲ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಆದ್ದರಿಂದ ಕಾಫಿ, ತಿಂಡಿ, ಊಟದ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ. ಗ್ಯಾಸ್ ಮತ್ತು ವಿದ್ಯುತ್ ದರ ಹೆಚ್ಚಳ ಈಗಾಗಲೇ ಮಾಡಲಾಗಿದೆ.


    Provided by
    Provided by

    ಮುಂದಿನ ದಿನಗಳಲ್ಲಿ ಅಕ್ಕಿ ಮತ್ತು ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸರ್ಕಾರ ಸುಳಿವು ನೀಡಿದೆ. ಹೋಟೆಲ್‌ ಗಳ ಮಾಲೀಕರ ಸಂಘದಿಂದ ದರ ಹೆಚ್ಚಳದ ಚರ್ಚೆ ಮಾಡಲಾಗುತ್ತಿದ್ದು, ಬಹುತೇಕ ಬೆಲೆ ಹೆಚ್ಚಳದ ನಿರ್ಧಾರ ಹೊರಬೀಳಲಿದೆ ಎಂದು ಹೇಳಿದ್ದಾರೆ.

    ವಿದ್ಯುತ್ ದರ ಏರಿಕೆಯಿಂದ ಎಲ್ಲಾ ಜನ ಸಾಮಾನ್ಯರಿಗೂ ಹಾಗೂ ಉದ್ಯಮಿಗಳಿಗೂ ಬಹುದೊಡ್ಡ ಶಾಕ್ ಕೊಟ್ಟಿರುತ್ತದೆ.
    ಇದಲ್ಲದೆ ಇತ್ತೀಚೆಗೆ ನಮ್ಮ ಉದ್ಯಮದಲ್ಲಿ ಅಗತ್ಯವಾಗಿರುವ ಕಾಫಿಪುಡಿ, ಬೇಳೆ ಕಾಳುಗಳು, ಮೆಣಸಿನಕಾಯಿ, ತರಕಾರಿ ಮುಂತಾದ ವಸ್ತುಗಳ ಬೆಲೆ ಗಗನಕ್ಕೇರಿರುತ್ತದೆ. ಇದರ ಜೊತೆಗೆ ಈಗ ಹಾಲು ಮತ್ತು ಅಕ್ಕಿಯ ಬೆಲೆಗಳೂ ಕೂಡ ದುಬಾರಿಯಾಗುವ ಸಂಭವಗಳಿವೆ.

    ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ತಕ್ಷಣ ಸ್ಪಂದಿಸಿ ಸಮಂಜಸವಾದ ಕ್ರಮ ತೆಗೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ದೈನಂದಿನ ಬಳಕೆಯ ವಸ್ತುಗಳ ಬೆಲೆಗಳನ್ನು ಹತೋಟಿಗೆ ತರದಿದ್ದರೆ ಹೋಟೆಲಿನಲ್ಲಿ ಕಾಫಿ, ತಿಂಡಿ-ತಿನಿಸುಗಳ ಬೆಲೆಗಳನ್ನು ಏರಿಸುವುದು ಅನಿವಾರ್ಯವಾಗಲಿದೆ ಎಂದು ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ ಸಿ ರಾವ್ ತಿಳಿಸಿದ್ದಾರೆ.

    ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗಾಗಿ ಗ್ಯಾರಂಟಿ ಯೋಜನೆ: ರಾಜ್ಯಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಸರ್ಕಾರದ ಮೇಲೆ ಸಾಕಷ್ಟು ಹೊರೆ ತರುತ್ತದೆ. ಇದರ ಹೊರತಾಗಿ ರಾಜ್ಯದ ಜನಸಾಮಾನ್ಯರ ಹೊರೆ ಇಳಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.

    ಟ್ವಿಟ್ ಮಾಡಿದ್ದ ಗುಂಡೂರಾವ್, ಕೇಂದ್ರ ಬಿಜೆಪಿ ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದ ಬೆಲೆ ಏರಿಕೆ ಸಮಸ್ಯೆ ಉಂಟಾಗಿದೆ. ಇದರ ಬಿಸಿ ಜನಸಾಮಾನ್ಯನಿಗೆ ತಟ್ಟಿದೆ. ಜನರ ಮೇಲಿರುವ ಬೆಲೆ ಏರಿಕೆಯ ಹೊರೆ ಕಡಿಮೆ ಮಾಡಲು ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ತಂದಿದೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ

    February 23, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

    February 24, 2026

    ಬೀದರ್: ಜಿಲ್ಲೆಯ ವರ್ಷದ ಮೊದಲ ಮಳೆ ಸೋಮವಾರ ಬೀದರ್‌ ನಗರ ಸೇರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ತುಂತುರಿನಿಂದ ಸುರಿಯಿತು. ಬೀದರ್‌…

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.