ಬಿಬಿಎಂಪಿ ವತಿಯಿಂದ ನಡೆಯುವ ನಾಡಪ್ರಭು ಕೆಂಪೇಗೌಡ ದಿಣಾಚರಣೆಯ ಪ್ರಯುಕ್ತ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಿನಾಂಕ: 28-06-2023 ರಿಂದ 05-07-2023 ರೊಳಗೆ ಬೇರೆಬೇರೆ ದಿನಗಳಂದು ಕೆಂಪೇಗೌಡ ದಿನಾಚರಣೆ ಹಾಗೂ ಜುಲೈ 9 ರಂದು ಸಮಾರೋಪ ಸಮಾರಂಭವನ್ನು ವಿಧಾನಸೌಧದ ಭವ್ಯ ಮೆಟ್ಟಿಲು ಮೇಲೆ ಆಚರಿಸಲಿದ್ದು, ಅದಕ್ಕೆ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವತಿಯಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸುವ ಸಂಬಂಧ ನಡೆದ ರವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜುಲೈ 9 ರಂದು ಪಾಲಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಲಾಗುವುದು. ಅದಕ್ಕಾಗಿ ಪಾಲಿಕೆ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಪಾಲಿಕೆಯ 198 ವರ್ ಗಳಲ್ಲಿಯೂ ವಿವಿಧ ಸೇವೆಗಳಲ್ಲಿ ಸಾಧನೆ ಮಾಡಿರುವಂತಹ ಒಬ್ಬರನ್ನು ಗುರುತಿಸಿ, 198 ಕೆಂಪೇಗೌಡ ಪ್ರಶಸ್ತಿಗಳನ್ನು ವಿತರಣೆ ಮಾಡಲಾಗುವುದು. ಅದಕ್ಕಾಗಿ ಮಾನ್ಯ ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ಕೂಡಾ ರಚನೆಯಾಗಲಿದೆ. ಸಮಿತಿ ರಚನೆಯಾದ ಬಳಿಕ 198 ವಾರ್ಡ್ ಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವಂತಹವರಿಗೆ ಕೆಂಪೇಗೌಡ ಪ್ರಶಸ್ತಿ ನೀಡಲಾಗುತ್ತೆ ಎಂದು ಹೇಳಿದರು.
ಸಭೆಯಲ್ಲಿ ಎಲ್ಲಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಆಡಳಿತ ವಿಭಾಗದ ಉಪ ಆಯುಕ್ತರು, ಪ್ರಧಾನ ಅಭಿಯಂತರರು, ಎಲ್ಲಾ ಮುಖ್ಯ ಅಭಿಯಂತರರು, ಮುಖ್ಯ ಲೆಕ್ಕಾಧಿಕಾರಿ, ತೋಟಗಾರಿಕಾ ವಿಭಾಗದ ಜಂಟಿ ನಲ್ಲೇಶಕರು, ಮುಖ್ಯ ಆರೋಗ್ಯಾಧಿಕಾರಿ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


