ಡಾ ಜಿ ಪರಮೇಶ್ವರ ಅವರು ಗೃಹ ಖಾತೆಯ ಕೆಲಸಗಳನ್ನು ಮರಿ ಖರ್ಗೆಗೆ ಲೀಸ್ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ನಳೀನ್ ಕಟೀಲ್ಲೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ ಎಂದು ಹರಿಹಾಯ್ದಿದೆ.
ಈ ವಿಚಾರವಾಗಿ ಟ್ವಿಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿಗರ ಇತ್ತೀಚಿನ ಮಾತು ಕೃತಿ ಗಮನಿಸಿದರೆ ನಮ್ಮ ಸರ್ಕಾರ ಉಚಿತ ಮಾನಸಿಕ ಚಿಕಿತ್ಸೆಯ ಯೋಜನೆಯನ್ನೂ ರೂಪಿಸಬೇಕಾದೀತು’ ಎಂದು ವಾಗ್ದಾಳಿ ನಡೆಸಿದೆ. ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣನಾದ ನಾಮಕಾವಸ್ಥೆ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ, ಇನ್ನು ಸಂಸದೀಯ ನಿಯಮಗಳ ಬಗ್ಗೆ ಅರಿವಿರಲು ಹೇಗೆ ಸಾಧ್ಯ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಪ್ರಿಯಾಂಕ್ ಖರ್ಗೆ ಅವರು ಕಲಬುರ್ಗಿಯ ಉಸ್ತುವಾರಿ ಸಚಿವರು, ಅಲ್ಲಿನ ವ್ಯವಸ್ಥೆಯನ್ನು ಸರಿಪಡಿಸುವುದು ಅವರ ಹೊಣೆಗಾರಿಕೆ, ಅಲ್ಲಿನ ಅಧಿಕಾರಿಗಳನ್ನು ಸರಿದಾರಿಗೆ ತರುವುದು ಅವರದ್ದೇ ಜವಾಬ್ದಾರಿ. ಇಷ್ಟು ಸಾಮಾನ್ಯ ತಿಳುವಳಿಕೆ ಇಲ್ಲದಿರುವುದಕ್ಕಾಗಿಯೇ ಕಟೀಲ್ ಅವರನ್ನು ‘ಕಾಮಿಡಿ ಕಿಲಾಡಿ’ ಎನ್ನುವುದು ಎಂದು ಕಾಂಗ್ರೆಸ್ ಹೇಳಿದೆ. ಕಟೀಲ್ ಅವರೇ, ತಾವು ಅಧ್ಯಕ್ಷಗಿರಿಯನ್ನು ಬಿಎಲ್ ಸಂತೋಷ್ ಅವರ ಪಾದರಕ್ಷೆಗಳಿಗೆ ಲೀಸ್ಟೆ ಕೊಟ್ಟಿದ್ದೀರಿ ಎಂದ ಮಾತ್ರಕ್ಕೆ ಬೇರೆಲ್ಲರೂ ಹಾಗೆಯೇ ಎಂದು ತಿಳಿಯುವುದು ಮೂರ್ಖತನ ಎಂದು ಕಾಂಗ್ರೆಸ್ ಕಿಡಿಕಾರಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


