nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026

    ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ

    July 3, 2026
    Facebook Twitter Instagram
    ಟ್ರೆಂಡಿಂಗ್
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    • ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
    • ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
    • ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
    • 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
    • ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    • ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್; ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ
    ರಾಜ್ಯ ಸುದ್ದಿ June 24, 2023

    ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್; ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ

    By adminJune 24, 2023No Comments2 Mins Read
    lakshmee hebbalkar

    ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಗೆ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪು ರೇಷೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

    ಡಿಸಿಎಂ ಡಿಕೆ ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ,‌ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್ ತಯಾರಾಗಿದ್ದು, ಈ ಕುರಿತು ಸಿಎಂ ಜೊತೆ ಚರ್ಚೆ ನಡೆಸಲಾಗುವುದು ಎಂದರು. ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ. ಯಾವತ್ತು ಅರ್ಜಿ ಸ್ವೀಕಾರ ಮಾಡಬೇಕು ಎಂದು ನಿರ್ಧಾರ ಮಾಡುತ್ತೇವೆ. ಸಿಎಂ ಗಮನಕ್ಕೆ ತಂದು ಅರ್ಜಿ ಸ್ವೀಕಾರ ಮಾಡುತ್ತೇವೆ ಎಂದು ಹೇಳಿದರು. ಆಗಸ್ಟ್ ತಿಂಗಳಲ್ಲಿ ಯೋಜನೆ ಜಾರಿಗೆ ಬರುತ್ತೆ. ಸೇವಾಸಿಂಧು ಸರ್ವರ್ ಗೆ ಓವರ್ ಲೋಡ್ ಆಗುತ್ತಿದೆ.  ಅಪ್ಡೇಟ್ ಆದ್ರೂ ಕೂಡ ಸಮಸ್ಯೆ ಆಗುತ್ತಿದೆ. ಇದಕ್ಕೆಲ್ಲಾ ಆ್ಯಪ್ ನಲ್ಲಿ ಪರಿಹಾರ ಸಿಗಲಿದೆ ಎಂದು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಸಂಪುಟ ಸಭೆಯಲ್ಲಿ  ಅಪ್ಲಿಕೇಷನ್ ಸಿಎಂಗೆ ತೋರಿಸಿ ಅಂತಿಮ ದಿನಾಂಕ ಘೋಷಣೆ ಮಾಡ್ತೇವೆ. ಕಂದಾಯ ಸಚಿವರು ನಾಡಕಚೇರಿ, ತಹಶಿಲ್ದಾರರ ಕಚೇರಿ ಬಗ್ಗೆ ಗಮನ ಹರಿಸ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರ ಅಡಿ ಬಾಪೂಜಿ ಕೇಂದ್ರಗಳು ಬರುತ್ತವೆ. ಹೀಗಾಗಿ ಮೂವರು ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದರು.

    ಗೃಹ ಜ್ಯೋತಿ ಯೋಜನೆದು ಒಂದೇ ಸಾರಿ ಓವರ್ ಲೋಡ್ ಆಗ್ತಾ ಇತ್ತು. ಲಕ್ಷಾಂತರ ಜನ ಅರ್ಜಿ ಹಾಕಿದ್ದರಿಂದ ಓವರ್ ಲೋಡ್ ಆಗಿತ್ತು. ಇದೀಗ ಗೃಹ ಜ್ಯೋತಿ ಸ್ಟೇಬಲ್ ಆಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಇಂದು ಒಂದೇ ದಿನ ಗೃಹ ಜ್ಯೋತಿ ಗೆ ಆರು ಲಕ್ಷ ಮಂದಿ ಅರ್ಜಿ ಹಾಕಿದ್ದಾರೆ. ಅದೇ ರೀತಿ ಗೃಹ ಲಕ್ಷ್ಮಿ ಕೂಡ ಸ್ಟೇಬಲ್ ಆಗಿರುವಂತೆ ನೋಡಿಕೊಳ್ಳುತ್ತೇವೆ ಎಂದರು.‌

    ಗೃಹ ಲಕ್ಷ್ಮಿ ಗಾಗಿ ಪ್ರಜಾಪ್ರತಿನಿಧಿ ಆಯ್ಕೆ ಮಾಡ್ತೇವೆ. ಕ್ಯಾಬಿನೇಟ್ ನಲ್ಲೂ ಪ್ರಜಾಪ್ರತಿನಿಧಿ ಆಯ್ಕೆ ಅಂತಿಮ ನಿರ್ಧಾರ ಆಗತ್ತೆ.  ಸಾವಿರ ಜನರಿಗೆ ಇಬ್ಬರು ಪ್ರಜಾಪ್ರತಿನಿಧಿ ಆಯ್ಕೆ ಮಾಡುವ ಕುರಿತು ಚರ್ಚೆ ಮಾಡಿದ್ದೇವೆ ಎಂದರು. ಟೈಂ ಬೌಂಡ್ ಇದಕ್ಕೆ ಇಲ್ಲ, ಹೀಗಾಗಿ ರಶ್ ಮಾಡಿಕೊಳ್ಳಲು ಹೋಗಬೇಡಿ ಎಂದು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ತುಮಕೂರು: ಪ್ರತಿಯೊಂದು ಕುಟುಂಬವು ಪ್ರೀತಿ, ವಾತ್ಸಲ್ಯದೊಂದಿಗೆ ಕುಟುಂಬದಲ್ಲಿ ಬೆಳೆಯುವ ಹಕ್ಕನ್ನು ಹೊಂದಿದ್ದು, ಕುಟುಂಬವು ಮಕ್ಕಳ ಬದುಕಿಗೆ ಜೀವನಾಡಿ” ಯಾಗಿ ಮಹತ್ತರವಾದ…

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026

    ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ

    July 3, 2026

    ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ

    July 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.