ಉಡುಪಿ: ಪತಿ ಪತ್ನಿಯ ನಡುವೆ ಕ್ಷುಲ್ಲಕ ವಿಚಾರಕ್ಕೆ ಆರಂಭಗೊಂಡ ಜಗಳ ದುರಂತವಾಗಿ ಅಂತ್ಯಕಂಡಿರುವ ಘಟನೆ ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿ ನಡೆದಿದೆ.
ಬೆಳಗ್ಗೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದರು. ಯಶೋಧಾರನ್ನು ರಕ್ಷಿಸಲು ನೀರಿಗೆ ಹಾರಿದ ಪತಿ ಇಮ್ಯಾನುಲ್ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್, ಯಶೋಧಾ ದಂಪತಿ ನಲ್ಲೂರಿನ ತೋಟವೊಂದರಲ್ಲಿ ಕೆಲಸಕ್ಕಿದ್ದರು. ದಂಪತಿ ಸಾವಿನಿಂದ ಇದೀಗ 10 ವರ್ಷದ ಬಾಲಕ ಹಾಗೂ 9 ವರ್ಷದ ಬಾಲಕಿ ಅನಾಥರಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


