16 ನೇ ವಿಧಾನಸಭೆಗೆ ಈಗ ಮೊದಲ ಬಾರಿಗೆ ಆಯ್ಕೆಯಾಗಿರುವ ನೂತನ ಶಾಸಕರಿಗೆ ಇಂದಿನಿಂದ ಮೂರು ದಿನಗಳ ಕಾಲ ತರಬೇತಿ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಬೆಂಗಳೂರಿನ ಹೊರವಲಯದ ನೆಲಮಂಗಲದ ಸಮೀಪವಿರುವ ಮಹದೇವಪುರದ ಧರ್ಮಸ್ಥಳ ಮಂಜುನಾಥೇಶ್ವರ ಆಡಳಿತ ಮಂಡಳಿಯ ಕ್ಷೇಮವನದಲ್ಲಿ ತರಬೇತಿ ಶಿಬಿರ ನಡೆಯಲಿದ್ದು, ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಒಟ್ಟು 70 ಮಂದಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದು, ಅವರಿಗೆ ಸದನದಲ್ಲಿ ಹೇಗೆ ನಡೆದುಕೊಳ್ಳಬೇಕು? ವಿಚಾರ ಮಂಡನೆ ಮಾಡುವುದು ಹೇಗೆ? ಎಂಬ ವಿಚಾರಗಳನ್ನು ಶಿಬಿರದಲ್ಲಿ ತಿಳಿಸಿಕೊಡಲಿದ್ದಾರೆ. ಇನ್ನು ಇಂದು ಮೊದಲ ದಿನವಾಗಿರುವ ಕಾರಣ ಬೆಳಿಗ್ಗೆಯಿಂದಲೇ ಶಾಸಕರುಗಳು ಕ್ಷೇಮವನದತ್ತ ಆಗಮಿಸಿದ್ದು, ಬೆಳ್ಳಂಬೆಳಿಗ್ಗೆ ಯೋಗ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಗಿದೆ. ಮಧ್ಯಾಹ್ನ 12 ಘಂಟೆಗೆ ಸಿಎಂ ಸಿದ್ಧರಾಮಯ್ಯ ಅಧಿಕೃತವಾಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


