ಹುಬ್ಬಳ್ಳಿ: ಈಗಾಗಲೇ ರಾಜ್ಯಕ್ಕೆ ಕೇಂದ್ರ ಸರ್ಕಾರ 5 ಕೆ.ಜಿ. ಅಕ್ಕಿ ಕೊಡುತ್ತಿದೆ. ನಮ್ಮ ಅಕ್ಕಿ ಬಿಟ್ಟು 10 ಕೆ.ಜಿ. ಅಕ್ಕಿ ಕೊಡುವ ಬಗ್ಗೆ ಸ್ಪಷ್ಟಪಡಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪದೇ ಪದೇ 10 ಕೆ.ಜಿ. ಅಕ್ಕಿಗೆ ಅಡ್ಡಗಾಲು ಹಾಕುತ್ತಿದ್ದೇವೆ ಅಂತಾರೆ. ರಾಜ್ಯ ಸರ್ಕಾರ ಮೇ 2ರಂದು ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ 5 ಕೆ.ಜಿ. ಕೊಡುತ್ತಿದೆ, ನಾವು 5 ಕೆ.ಜಿ. ಕೊಡುತ್ತೇವೆ ಅಂತ ಹೇಳಲಿ. ನಿಮಗೆ ಅಕ್ಕಿ ಬೇಕಾದರೆ ಕೇಂದ್ರ ಸರ್ಕಾರದ ಬಳಿ ಕೇಳಬೇಕು. ನೈಸರ್ಗಿಕ ವಿಕೋಪ ಬಂದಾಗ ನಮಗೆ ಅಕ್ಕಿ ಸ್ಟಾಕ್ ಅವಶ್ಯಕವಿದೆ. ಕಾಂಗ್ರೆಸ್ ಮೊದಲು ಸುಳ್ಳು ಹೇಳೋದು ಬಂದ್ ಮಾಡಬೇಕು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


