ಇಂಡಿಯನ್ ಮನಿ ಡಾಟ್ ಕಾಮ್ ಕಂಪನಿ ಹಾಗೂ ಫ್ರೀಡಂ ಆ್ಯಪ್ ಆಡಳಿತ ಮಂಡಳಿ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಗಳ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅದರ ತೆರವಿಗೆ ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
‘ಅರೆಕಾಲಿಕ ಕೆಲಸದ ಆಮಿಷ ಹಾಗೂ ಕೋರ್ಸ್ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸಲಾಗಿದೆ’ ಎಂದು ಸಂತ್ರಸ್ತರು ದೂರು ನೀಡಿದ್ದರು. ಅದನ್ನು ಆಧರಿಸಿ 6 ಪ್ರತ್ಯೇಕ ಎಫ್‌ಐಆರ್ ದಾಖಲಿಸಿಕೊಂಡಿದ್ದ ಬನಶಂಕರಿ ಠಾಣೆ ಪೊಲೀಸರು, ಕಂಪನಿಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ. ಎಸ್. ಸುಧೀರ್ ಹಾಗೂ ಮಾನವ ಸಂಪನ್ಮೂಲ ವಿಭಾಗದ ರಘು ಅವರನ್ನು ಬಂಧಿಸಿದ್ದರು. ಸುಧೀರ್ ಹಾಗೂ ಇತರರಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ. ಈ ಮಧ್ಯೆಯೇ, ಆರೋಪಿಗಳು ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದರು. ತಡೆಯಾಜ್ಞೆ ತೆರವಿವು ಕೋರಿ ಹೈಕೋರ್ಟ್‌ಗೆ ಮನವಿ ಸಲ್ಲಿಸಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


