ತುಮಕೂರು: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು ಕಾಗದಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಕೃಷಿ ಇಲಾಖೆ ಜೆ.ಡಿ.ರವಿ ಮನೆ ಹಾಗೂ ಫಾರಂ ಹೌಸ್ ನಲ್ಲಿ ಮೊಕ್ಕಂ ಹೂಡಿದ್ದಾರೆ.
ತುಮಕೂರು ಕೃಷಿ ಇಲಾಖೆಯಲ್ಲಿ ಜೆಡಿ ಆಗಿ ಕೆಲಸ ನಿರ್ವಹಿಸುತ್ತಿರುವ ರವಿ ಇತ್ತೀಚೆಗಷ್ಟೇ ಹಾಸನದಿಂದ ತುಮಕೂರಿಗೆ ವರ್ಗಾವಣೆಯಾಗಿದ್ದರು.
ತುಮಕೂರು ನಗರದ ಶಂಕರಪುರದಲ್ಲಿ ಇರುವ ನಿವಾಸ ಹಾಗೂ ರಾಮನಗರದ ಫಾರಂ ಹೌಸ್ ಮೇಲೆ ದಾಳಿ ಮಾಡಿದ್ದಾರೆ. ದಾಖಲಾತಿಗಳನ್ನು ಪರಿಶೀಲಿಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಇನ್ನೊಂದೆಡೆ ತುಮಕೂರಿನ ಶಿರಾದ ಪಂಚಾಯರ್ ರಾಜ್ ಎಇ ಪುಟ್ಟರಾಜು ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ಶಿರಾ ತಾಲೂಕಿನ ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರಿಂಗ್ ವಿಭಾಗದಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿದ್ದು ಅವರ ತುಮಕೂರು ನಗರದ ಅಶೋಕ ನಗರದ 9ನೇ ಕ್ರಾಸ್ ನಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ.
ಯಲ್ಲಾಪುರದಲ್ಲಿರುವ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಾಗದಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇವರು ಇತ್ತೀಚಿಗಷ್ಟೇ ಭದ್ರಾವತಿಯಿಂದ ತುಮಕೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA