ಕೆ. ಆರ್. ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಶೋಧ ನಡೆಸಿದರು.
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು ಅಜಿತ್ ಕುಮಾರ್ ರೈ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ. ಲೋಕಾಯುಕ್ತ ಎಸ್ ಪಿ ಕೆ. ವಿ. ಅಶೋಕ್ ನೇತೃತ್ವದಲ್ಲಿ ಅಜಿತ್ ಅವರ ಮನೆ ಹಾಗೂ ಇತರ ಹತ್ತು ಸ್ಥಳಗಳ ಮೇಲೆ ಬುಧವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ.
ಅಜಿತ್ ಕುಮಾರ್ ಅವರ ಮನೆಯಲ್ಲಿ ಬೃಹತ್ ಪ್ರಮಾಣದ ನಗದು ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


