ತುಮಕೂರು: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮುಸ್ಲಿಂ ಬಾಂಧವರ ಬಹುಪಾಲು ಮತ ವಿಚಾರಕ್ಕೇ ಸಂಬಂಧಪಟ್ಟಂತೆ ಎಲ್ಲೋ ಒಂದುಕಡೆ ಮುಸ್ಲಿಂರಿಗೆ ಹಿಂದಿನ ಸರ್ಕಾರದಿಂದ ಆತಂಕ ಇತ್ತು, ಭಯದ ವಾತಾವರಣ ಇತ್ತು. ಅದೆಲ್ಲವನ್ನೂ ಬಿಟ್ಟು ಕಾಂಗ್ರೆಸ್ ಗೆ ಮತಹಾಕಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ .
ತುಮಕೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜಾತ್ಯತೀತವಾದ ಪಕ್ಷ, ಹಾಗಾಗಿ ಅವರು ನಮ್ಮ ಜೊತೆ ನಿಂತಿದ್ದಾರೆ, ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಅಭಿವೃದ್ಧಿ ಜೊತೆಗೆ ಶಾಂತಿ ಕಾಪಡಬೇಕಿದೆ ಎಂದು ತಿಳಿಸಿದರು.
ಗೃಹ ಸಚಿವನಾಗಿ ಶಾಂತಿ ಕಾಪಾಡುವ ಕೆಲಸ ಮಾಡುತ್ತೇನೆ. ದ್ವೇಷ ಸಾಧಿಸಲು ಹೋಗೋದಿಲ್ಲ.ಶಾಂತಿ ಕಾಪಾಡುತ್ತೇನೆ, ಭಾರತ ಶಾಂತಿ ನಂಬಿದ ದೇಶ, ಸಂವಿಧಾನದಲ್ಲೇ ಅದನ್ನು ಅಳವಡಿಸಿಕೊಂಡಿದ್ದೇವೆ ಎಂದರು.
ಅಕ್ಕಿ ಬದಲು ದುಡ್ಡು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದುಡ್ಡು ಕೊಡೋದನ್ನು ಕೆಲವರು ಮಾತ್ರ ವಿರೋಧಿಸುತ್ತಾರೆ. ನಾವು ಅಕ್ಕಿ ಕೊಡಲೇಬೇಕು ಎಂದು ತೀರ್ಮಾನ ಮಾಡಿದ್ದೇವೆ. ಕೊಟ್ಟೇ ಕೊಡ್ತಿವಿ, ಅದರಲ್ಲಿ ಎರಡು ಮಾತಿಲ್ಲ ಎಂದರು.
ದುಡ್ಡು ಕೊಟ್ಟರೂ ಕೇಂದ್ರ ಅಕ್ಕಿ ಕೊಡುತ್ತಿಲ್ಲ. ದೇಶದ ಗೋದಾಮಿನಲ್ಲಿ ಅಕ್ಕಿ ಕೊಳೆಯುತ್ತಿದೆ. ರಾಜ್ಯದ ಎಫ್ ಸಿ ಐ ನಲ್ಲಿ 7 ಲಕ್ಷ ಟನ್ ಸ್ಟಾಕ್ ಇದೆ ಎಂದರು.
ಅವರು ಖಾಸಗಿಯವರಿಗೆ ಮಾರುತಿದ್ದಾರೆ. ನಮಗೆ ರಾಜಕೀಯ ಕಾರಣಕೋಸ್ಕರ ಕೊಡುತ್ತಿಲ್ಲ. 5 ಕೆಜಿ ಅಕ್ಕಿ ಬದಲಿಗೆ ದುಡ್ಡು ಕೊಡುತ್ತೇವೆ. ಮೂರು ತಿಂಗಳ ಕಾಲ ದುಡ್ಡು ಕೊಡುತ್ತೇವೆ, ಅಷ್ಟರಲ್ಲಿ ಅಕ್ಕಿ ಹೊಂದಿಸುತ್ತೇವೆ ಎಂದರು.
10 ಕೆಜಿ ಅಕ್ಕಿ ದುಡ್ಡು ಹಾಕಬೇಕು ಎಂಬ ಬಿಜೆಪಿ ವಾದ ಬಿಜೆಪಿ ಅವರಿಗೆ ಇದರ ಕುರಿತು ಮಾತನಾಡುವ ನೈತಿಕತೆ ಇಲ್ಲ, ನಾವು ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA