ಬೋರಿಂಗ್ ಆಸ್ಪತ್ರೆಗೆ ಬಡ ಮಹಿಳೆಯನ್ನು ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಿ ಕಾಂಗ್ರೆಸ್ ಶಾಸಕ ಡಾ. ಹೆಚ್. ಡಿ ರಂಗನಾಥ್ ಕರ್ತವ್ಯ ಮೆರೆದಿದ್ದಾರೆ. ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ನಿವಾಸಿಯಾದ ಆಶಾ ಎಂಬ ಮಹಿಳೆಯ ಕೀಲು ಡಿಸ್ ಲೋಕೆಟ್ ಆಗಿತ್ತು. ಇದನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಲು 5 ಲಕ್ಷ ರೂಪಾಯಿಗಳು ವೆಚ್ಚವಾಗುತ್ತಿತ್ತು.
ಮಹಿಳೆಯು ಆರ್ಥಿಕವಾಗಿ ಸಂಕಷ್ಟದಲ್ಲಿದ್ದರು. ಹೀಗಾಗಿ ಆ ಮಹಿಳೆಯನ್ನು ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಶಾಸಕ ಡಾ. ರಂಗನಾಥ್ ಅವರು ಉಚಿತವಾಗಿ ಬರೋಬ್ಬರಿ 4 ತಾಸು ತಾವೇ ಆಪರೇಷನ್ ಮಾಡಿದ್ದಾರೆ. ಡಾ. ರಂಗನಾಥ್ ಅವರು ಮೂಲತಹ ಆರ್ಥೋಪೆಡಿಕ್ ಡಾಕ್ಟರ್ ಆಗಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಶಾಸಕರ ಈ ಸೇವೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಆಶಾ ಅವರು ಕಳೆದ 10 ವರ್ಷದ ಹಿಂದೆ ಯಶಸ್ವಿನಿ ಯೋಜನೆಯಡಿ ಕೀಲು ಆಪರೇಷನ್ ಮಾಡಿಸಿಕೊಂಡಿದ್ದರು. ಈಗ ಅದು ಮತ್ತೆ ಡಿಸ್ ಲೋಕೆಟ್ ಆಗಿತ್ತು. ಇದರಿಂದ ಸರ್ಕಾರದ ಯೋಜನೆಯಾದ ಯಶಸ್ವಿನಿಯಡಿ 2 ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಮತ್ತೆ ಸರ್ಜರಿ ಮಾಡಿಸಬೇಕು ಎಂದರೆ ಹಣ ಪಾವತಿಸಬೇಕಾಗಿತ್ತು. ಈ ಬಗ್ಗೆ ಶಾಸಕರ ಬಳಿ ಮಹಿಳೆಯು ನೋವು ಹೇಳಿಕೊಂಡಿದ್ದರು. ಶಾಸಕರಾದ ಡಾ. ರಂಗನಾಥ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


