ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯದ ಕೆಲವು ಸರ್ಕಾರಿ ಸಂಸ್ಥೆಗಳ ಖಾಲಿ ಇರುವ ಹುದ್ದೆಗಳನ್ನು ತುಂಬಲು ನೇರ ನೇಮಕಾತಿಗೆ ವಿಧಿಸಿದ್ದ ಅರ್ಜಿ ಶುಲ್ಕವನ್ನು ಕಡಿಮೆ ಮಾಡಿದೆ.
ಕೆಇಎ ವತಿಯಿಂದ ಈ ಮುಂಚೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಸಂಬಂಧದ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಈ ಪರಿಷ್ಕೃತ ಶುಲ್ಕ ಅನ್ವಯವಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರಕಟಣೆಯಲ್ಲಿ ಬುಧವಾರ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


