ಜೈಪುರ: ಕಳೆದ ವರ್ಷ ಜೂನ್ 28ರಂದು ಇಸ್ಲಾಂ ಧರ್ಮಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಕನ್ಹಯ್ಯ ಲಾಲ್ ಅವರನ್ನುಅವರದ್ದೇ ಅಂಗಡಿಯಲ್ಲಿ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಕನ್ಹಯ್ಯ ಲಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ವಿಶೇಷ ನ್ಯಾಯಾಲಯ ರಚನೆ ಮಾಡಿದ್ದರೆ ಈ ವೇಳೆಗೆ ಆರೋಪಿಗಳನ್ನು ಬಂಧಿಸಿ ನೇಣಿಗೆ ಹಾಕಬಹುದಾಗಿತ್ತು ಎಂದು ಅವರು ಹೇಳಿದರು.
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳ ಅನಾವರಣ ಉದ್ದೇಶದಿಂದ ಉದಯಪುರದಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಮಾತನಾಡಿದ ಶಾ, ‘ರಾಜಸ್ಥಾನ ಸರ್ಕಾರ ವಿಶೇಷ ನ್ಯಾಯಾಲಯ ರಚನೆ ಮಾಡಲಿಲ್ಲ. ಇಲ್ಲದಿದ್ದರೆ, ಇಷ್ಟೊತ್ತಿಗೆ ಕೊಲೆಗಾರರು ಗಲ್ಲಿಗೇರುತ್ತಿದ್ದರು’ ಎಂದು ಅವರು ಹೇಳಿದರು.
ಜನರು ತಮಗೆ ನೀಡುತ್ತಿರುವ ಬೆಂಬಲವನ್ನು ನೋಡಿದರೆ 2024ರಲ್ಲಿ 300 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿ, ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


