ಕೊಳೆಗೇರಿಗಳಲ್ಲಿ ವಾಸಿಸುವ ಕುಟುಂಬಗಳಿಗೆ ಶಾಶ್ವತ ವಸತಿ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಇಂದಿಲ್ಲಿ ಭರವಸೆ ನೀಡಿದರು.
ಕೊಳೆಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಶುಕ್ರವಾರ ಕೊಳೆಗೇರಿ ವಾಸಿಗಳು, ಕೊಳೆಗೇರಿ ನಿವಾಸಿಗಳ ಪರವಾದ ಸಂಘ- ಸಂಸ್ಥೆಗಳಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. ಕೊಳೆಗೇರಿ ಪ್ರದೇಶಗಳಲ್ಲಿ ಹಲವು ಜನರಿಗೆ ಸೂರಿಲ್ಲ. ಹತ್ತಾರು ವರ್ಷಗಳಿಂದ ಗುಡಿಸಲು ಹಾಗೂ ಕಚ್ಛಾ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಕೆರೆಯಂಗಳ, ಮಳೆ ನೀರು ಹರಿಯುವ ಕಾಲುವೆ, ವಿದ್ಯುತ್ ಮಾರ್ಗ, ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಮನೆ ಕಟ್ಟಿಕೊಡಲು ಸಾಧ್ಯವಾಗಿಲ್ಲ. ಹಾಗಾಗಿ, ಅವರಿಗೆಲ್ಲ ಪ್ರತ್ಯೇಕ ಸ್ಥಳದಲ್ಲಿ ಶಾಶ್ವತ ನೆಲೆ ಕಲ್ಪಿಸಲಾಗುವುದು ಎಂದರು.
ಕೆ. ಆರ್. ಪುರ ಹೋಬಳಿ ಬಿದರಹಳ್ಳಿಯಲ್ಲಿ ಎಂಟು ಎಕರೆ ಗುರುತಿಸಲಾಗಿದೆ. ಕಂದಾಯ ಸಚಿವರ ಜತೆ ಚರ್ಚಿಸಿ, ಭೂಮಿ ಪಡೆದು ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ವಸತಿ ಸಮುಚ್ಚಯ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.
ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಪ್ರಧಾನ ಎಂಜಿನಿಯರ್ ಬಾಲರಾಜು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


