nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026
    Facebook Twitter Instagram
    ಟ್ರೆಂಡಿಂಗ್
    • ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
    • ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಲು ಮರದ ತಿಮ್ಮಕ್ಕನವರ ಕಿರುಪರಿಚಯ ಇಲ್ಲಿದೆ ನೋಡಿ….
    ಲೇಖನ July 1, 2023

    ಸಾಲು ಮರದ ತಿಮ್ಮಕ್ಕನವರ ಕಿರುಪರಿಚಯ ಇಲ್ಲಿದೆ ನೋಡಿ….

    By adminJuly 1, 2023No Comments2 Mins Read

    ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.

    ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ ೯೪ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು. ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ ೪ ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ ೨೦ ಸಸಿಗಳನ್ನು ನೆಡಲಾಯಿತು.


    Provided by
    Provided by

    ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು. ಈ ಗಂಡ-ಹೆಂಡಿರು ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಸಸಿಗಳು ಬೆಳೆಯಲು ನೀರಿನ ಅವಶ್ಯಕತೆಯಿರುವುದರಿಂದ, ಅವಗಳನ್ನು ಹೆಚ್ಚಾಗಿ ಮುಂಗಾರು ಮಳೆಯ ಕಾಲದಲ್ಲಿ ನೆಡಲಾಯಿತು.

    ಪ್ರಶಸ್ತಿ, ಗೌರವ:

    ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಈ ಕೆಳಗಿನ ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ.

    ರಾಷ್ಟ್ರೀಯ ಪೌರ ಪ್ರಶಸ್ತಿ – ೧೯೯೫

    ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ – ೧೯೯೭

    ವೀರಚಕ್ರ ಪ್ರಶಸ್ತಿ – ೧೯೯೭

    ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ – ಇವರಿಂದ ಮಾನ್ಯತೆಯ ಪ್ರಮಾಣ ಪತ್ರ

    ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು – ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.

    ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ – ೨೦೦೦

    ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ – ೨೦೦೬

    ಪಂಪಾಪತಿ ಪರಿಸರ ಪ್ರಶಸ್ತಿ

    ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ

    ವನಮಾತೆ ಪ್ರಶಸ್ತಿ

    ಮಾಗಡಿ ವ್ಯಕ್ತಿ ಪ್ರಶಸ್ತಿ

    ಶ್ರೀಮಾತಾ ಪ್ರಶಸ್ತಿ

    ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ

    ಕರ್ನಾಟಕ ಪರಿಸರ ಪ್ರಶಸ್ತಿ

    ಮಹಿಳಾರತ್ನ ಪ್ರಶಸ್ತಿ

    ನ್ಯಾಷನಲ್ ಸಿಟಿಜನ್ ಪ್ರಶಸ್ತಿ

    ರಾಜ್ಯೋತ್ಸವ ಪ್ರಶಸ್ತಿ

    ಹೂವಿನಹೊಳೆ ಪ್ರತಿಷ್ಠಾನ Archived 2021-05-18 ವೇಬ್ಯಾಕ್ ಮೆಷಿನ್ ನಲ್ಲಿ.ದ ವಿಶ್ವಾತ್ಮ ಪುರಸ್ಕಾರ ೨೦೧೫

    ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.

    ೨೦೧೦ರ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಲಭಿಸಿದೆ.

    ೨೦೧೯ ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

    ೨೦೨೦ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

    ಪ್ರಸ್ತುತದ ಚಟುವಟಿಕೆ:

    ತಿಮ್ಮಕ್ಕ ಅವರ ಪತಿ ೧೯೯೧ರಲ್ಲಿ ಮೃತಪಟ್ಟರು. ಇಂದು, ಭಾರತದಲ್ಲಿ ಹಲವಾರು ಕಾಡು ಬೆಳೆಸುವ ಕಾರ್ಯಕ್ರಮಗಳಿಗೆ ತಿಮ್ಮಕ್ಕ ಅವರನ್ನು ಆಹ್ವಾನಿಸಲಾಗುತ್ತದೆ. ತಮ್ಮ ಹಳ್ಳಿಯ ವಾರ್ಷಿಕ ಜಾತ್ರೆಗಾಗಿ ಮಳೆ ನೀರು ಶೇಖರಿಸಲು ದೊಡ್ಡ ತೊಟ್ಟಿಯ ನಿರ್ಮಾಣವೂ ಸೇರಿದಂತೆ ಇವರು ಇತರೆ ಸಮಾಜ ಸೇವೆಯ ಕೆಲಸಗಳಲ್ಲಿ ತೊಡಗಿದ್ದಾರೆ. ಇವರು ತಮ್ಮ ಹಳ್ಳಿಯಲ್ಲಿ ಒಂದು ಆಸ್ಪತ್ರೆಯನ್ನು ಕಟ್ಟುವ ಆಸೆಯನ್ನಿಟ್ಟುಕೊಂಡಿದ್ದಾರೆ. ಇದಕ್ಕಾಗಿ ಒಂದು ನ್ಯಾಸ ನಿಧಿಯನ್ನು ನಿಯೋಜಿಸಲಾಗಿದೆ.

     

    ಸಂಗ್ರಹ: ಯತೀಶ್ ಕುಮಾರ್,

    ರಾಜ್ಯ ಮಟ್ಟದ “ಶಿಕ್ಷಕರತ್ನ” ಪ್ರಶಸ್ತಿ ಪುರಸ್ಕೃತರು, ಚಿತ್ರಕಲಾ ಶಿಕ್ಷಕರು

     

     

    admin
    • Website

    Related Posts

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!

    January 9, 2026

    ಉದ್ಧಟತನ ಕಲಿಸಿದ ಪಾಠ

    January 7, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ನಮ್ಮ ಜೀವನದಲ್ಲಿ ನಾನಾ ರೀತಿಯ ವ್ಯಕ್ತಿಗಳು ಎದುರಾಗುತ್ತಾರೆ. ಕೆಲವರು ಸೌಮ್ಯ ಸ್ವಭಾವದವರಾಗಿದ್ದರೆ, ಇನ್ನು ಕೆಲವರು ನಮ್ಮ ತಾಳ್ಮೆಯನ್ನು ಪರೀಕ್ಷಿಸುವಂತಿರುತ್ತಾರೆ. ಕಚೇರಿಯಲ್ಲಿ…

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    January 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.