ತುಮಕೂರು: ಜಿಲ್ಲೆಯಲ್ಲಿ ಆಡಳಿತಾತ್ಮಕ ಭೂಮಿ ವಸತಿ ಸಮಸ್ಯೆಗಳ ಕುರಿತು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಶನಿವಾರ ಬೆಳಿಗ್ಗೆ ಮುಂದಿನ ಹೋರಾಟಗಳ ರೂಪುರೇಷೆಗಳ ಬಗ್ಗೆ ತುಮಕೂರಿನ ಭೂಮಿ ವಸತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಭೆಯು ಯಶಸ್ವಿಯಾಗಿ ನಡೆಯಿತು
ತುಮಕೂರು ಜಿಲ್ಲೆಯ ಚಿ.ನಾ ಹಳ್ಳಿ,ತುಮಕೂರು, ಮಧುಗಿರಿ, ಕೊರಟಗೆರೆ ತಾಲ್ಲೂಕುಗಳ ಸುಮಾರು 300 ಜನರು ಸಭೆಯಲ್ಲಿ ಭಾಗವಹಿಸಿ ಸಮಿತಿಯಲ್ಲಿ ಸಮಸ್ಯೆಗಳನ್ನು ನೊಂದಾಯಿಸಿಕೊಂಡರು. ಇದೇ ವೇಳೆ ಸಮಿತಿಗೆ ಬಂದಿರುವ ಸಾರ್ವಜನಿಕರ ಸಮಸ್ಯೆಗಳನ್ನು ಪಟ್ಟಿ ಮಾಡಿ, ಜುಲೈ ತಿಂಗಳ 15ನೇ ತಾರೀಖಿನ ನಂತರ ಸುಮಾರು 500 ಜನರು ಒಂದು ದಿನದ ಸಾಂಕೇತಿಕ ಪ್ರತಿಭಟನೆ ಕೈಗೊಂಡು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿ ಸಮಸ್ಯೆಗಳನ್ನು ಮೂರು ತಿಂಗಳೊಳಗೆ ಬಗೆಹರಿಸಿ ಕೊಡಲು ಒತ್ತಾಯಿಸಲು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರನ್ನು ಭೇಟಿ ಮಾಡಿ ತುರ್ತು ಸಮಸ್ಯೆಗಳ ಬಗ್ಗೆ ವಿಚಾರ ಮಾಡಲಾಯಿತು. ಈ ವೇಳೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತುಮಕೂರು ಜಿಲ್ಲೆಯ ಎಲ್ಲಾ ಹೋರಾಟಗಾರರು ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA