ಕಾರವಾರ: ನಡುರಸ್ತೆಯಲ್ಲಿ ದನದ ತಲೆಯೊಂದು ಬಿದ್ದಿರುವಂತಹ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೆಗಡೆಕಟ್ಟಾ ಗ್ರಾಮದಲ್ಲಿ ಈ ಘಟನೆ ಕಂಡು ಬಂದಿದ್ದು, ಸದ್ಯ ಆತಂಕ ಸೃಷ್ಟಿಸಿದೆ.
ಅಪರಿಚಿತರು ದನದ ತಲೆ ಕತ್ತರಿಸಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಇನೊಂದೆಡೆ ಪೊದೆಯಲ್ಲಿ ಎಸೆದಿದ್ದ ದನದ ತಲೆಯನ್ನ ಕಚ್ಚಿ ತಂದು ಶ್ವಾನಗಳು ರಸ್ತೆ ಬಿಸಾಡಿವೆ ಎನ್ನಲಾಗುತ್ತಿದೆ.
ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


