ತುಮಕೂರು: ಈಜು ಬಾರದಿದ್ದರೂ ನೀರಿಗೆ ಬಿದ್ದ ತನ್ನಿಬ್ಬರು ಮಕ್ಕಳನ್ನು ರಕ್ಷಿಸಿ ತಾಯಿ ನೀರುಪಾಲಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ರಥಸಂದ್ರ ಗ್ರಾಮದ ಕೆರೆಯಲ್ಲಿ ನಡೆದಿದೆ.
ಮನು(30) ಮೃತ ಮಹಿಳೆಯಾಗಿದ್ದಾರೆ. ಇವರು ಇಬ್ಬರು ಮಕ್ಕಳೊಂದಿಗೆ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಮಕ್ಕಳು ಕೆರೆ ದಡದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಇಬ್ಬರು ಮಕ್ಕಳು ಕೂಡ ಕೆರೆಗೆ ಬಿದ್ದಿದ್ದಾರೆ.
ತಕ್ಷಣವೇ ಕೆರೆಗೆ ಹಾರಿದ ಮನು ಮಕ್ಕಳಿಬ್ಬರನ್ನು ರಕ್ಷಿಸಿ ನೀರಿನಿಂದ ಮೇಲೆ ಹಾಕಿದ್ದಾರೆ. ಆದ್ರೆ ಈಜು ಬಾರದ ಕಾರಣ ತಾನು ನೀರಿನಿಂದ ಮೇಲೆ ಬರಲಾಗದೇ ಕೆರೆಯಲ್ಲೇ ಮುಳುಗಿ ಸಾವನ್ನಪ್ಪಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA