ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿದ್ದು, ಎನ್ ಸಿಪಿ ನಾಯಕ ಅಜಿತ್ ಪವಾರ್ ಬಂಡಾಯವೆದ್ದು ಹಲವಾರು ಶಾಸಕರೊಂದಿಗೆ ಶಿಂಧೆ ಸರ್ಕಾರವನ್ನು ಸೇರಿದ್ದು, ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಎನ್ ಸಿಪಿಯ ಹಿರಿಯ ನಾಯಕ ಛಗನ್ ಭುಜಬಲ್ ಕೂಡ ಮಹಾರಾಷ್ಟ್ರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ರಾಜ್ಯಪಾಲ ರಮೇಶ್ ಬೈಸ್ ಪ್ರಮಾಣವಚನ ಬೋದಿಸಿದರು.
ಪ್ರಮಾಣ ವಚನ ಸ್ವೀಕಾರದ ವೇಳೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ರಾಜಭವನದಲ್ಲಿ ಉಪಸ್ಥಿತರಿದ್ದರು. ಮಹಾರಾಷ್ಟ್ರದ ಮಾಜಿ ಗೃಹ ಸಚಿವರಾದ ದಿಲೀಪ್ ವಾಲ್ಸೆ ಪಾಟೀಲ್, ಹಸನ್ ಮುಶ್ರೀಫ್, ಸಂಜಯ್ ಬನ್ಸೋಡೆ, ಅದಿತಿ ತಟ್ಕರೆ, ಧರ್ಮರಾವ್ ಮತ್ತು ಧನಂಜಯ್ ಮುಂಡೆ ಕೂಡ ಮಹಾರಾಷ್ಟ್ರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


