ಬೆಂಗಳೂರು-ಧಾರವಾಡ ನಡುವೆ ಆರಂಭಗೊಂಡಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಯಾಣಿಕರ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. 8 ಕೋಚ್ ಗಳ ಈ ರೈಲಿನಲ್ಲಿ 52 ಸೀಟುಗಳು ಎಕ್ಸಿಕ್ಯುಟಿವ್ ಕ್ಲಾಸ್ ದ್ದಾಗಿವೆ. 478 ಸೀಟುಗಳು ಎಸಿ ಚೇರ್ ಕಾರ್ ಆಗಿವೆ.
ಬೆಂಗಳೂರಿನಿಂದ ಬೆಳಿಗ್ಗೆ ಹೊರಟರೆ ಮಧ್ಯಾಹ್ನದೊಳಗೆ ಧಾರವಾಡಕ್ಕೆ ತಲುಪುತ್ತಿರುವುದು, ಮಧ್ಯಾಹ್ನ ಧಾರವಾಡದಿಂದ ಹೊರಟು ಸಂಜೆ ಬೆಂಗಳೂರಿಗೆ ತಲುಪುತ್ತಿರುವುದು ಪ್ರಯಾಣಿಕರ ಸ್ಪಂದನೆ ಜಾಸ್ತಿಯಾಗಲು ಕಾರಣವಾಗಿದೆ. ಇತರೇ ರೈಲುಗಳಿಗಿಂತ ದರ ಬಹಳ ಅಧಿಕವಿದ್ದರೂ ನೂಕುನುಗ್ಗಲು ಇಲ್ಲದ, ಸುಖ ಪ್ರಯಾಣಕ್ಕಾಗಿ ವಂದೇ ಭಾರತ್‌ಗೆ ಆದ್ಯತೆ ನೀಡುತ್ತಿದ್ದಾರೆ.
ಪ್ರಯಾಣಿಕರಿಗೆ ಉತ್ತಮ ಸೌಲಭ್ಯ, ವೇಗವಾದ ಪ್ರಯಾಣ ಸಿಗುತ್ತಿರುವುದರಿಂದ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಮೈಸೂರು-ಚೆನ್ನೈ ವಂದೇ ಭಾರತ್ ಯಶಸ್ವಿಯಾದಂತೆ ಬೆಂಗಳೂರು- ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಕೂಡ ಯಶಸ್ವಿಯಾಗಲಿದೆ ಎಂದು ವಿಭಾಗೀಯ ರೈಲ್ವೆ ಹೆಚ್ಚುವರಿ ವ್ಯವಸ್ಥಾಪಕಿ (ಆಡಳಿತ) ಕುಸುಮಾ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


