ನಕಲಿ ಲಿಂಕ್ ಹಾಗೂ ಆ್ಯಪ್ ಗಳ ಬಗ್ಗೆ ಎಚ್ಚರವಹಿಸಿ ಎಂದು ಬೆಂಗಳೂರು ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ನಾಗರಿಕರು ಸೇವಾಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಸಿಕೊಳ್ಳಬೇಕು.
ಆದರೆ ಸೈಬರ್ ಖದೀಮರು ಹಲವು ನಕಲಿ ಆ್ಯಪ್ ಹಾಗೂ ಲಿಂಕ್ ಗಳನ್ನು ಹರಿಯಬಿಟ್ಟು, ನಾಗರಿಕರ ಮಾಹಿತಿಗೆ ಕನ್ನ ಹಾಕುತ್ತಿದ್ದಾರೆ. ‘ಗ್ಯಾರಂಟಿ ಯೋಜನೆಗಳ ನೋಂದಣಿಗೆ ಸರ್ಕಾರ ಯಾವುದೇ ಆ್ಯಪ್ ಅನ್ನು ಪರಿಚಯಿಸಿಲ್ಲ. ಆದರೆ ಹಲವು ನಕಲಿ ಆ್ಯಪ್ ಗಳು ಡೌನ್ ಲೋಡ್ ಮಾಡಿಕೊಳ್ಳಲು ಲಭ್ಯವಿದೆ. ಫಲಾನುಭವಿಗಳು ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕು. ಆ್ಯಪ್ ಗಳನ್ನು ರಿಪೋರ್ಟ್ ಮಾಡಬೇಕು. ಈ ಬಗ್ಗೆ ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ’ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಸ್. ಡಿ ಶರಣಪ್ಪ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


