ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಗೃಹ ಜ್ಯೋತಿ ಯೋಜನೆಯಡಿ ಹಿಂಬಾಕಿ ಇದ್ದರೂ ಈ ಯೋಜನೆಯ ಪ್ರಯೋಜನ ದೊರೆಯಲಿದೆ ಎಂಬುದಾಗಿ ಇಂಧನ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಇಂಧನ ಇಲಾಖೆಯೂ, ಗೃಹ ಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು ಹಿಂಬಾಕಿ ಪಾವತಿಸುವುದು ಕಡ್ಡಾಯಗೊಳಿಸಲಾಗಿತ್ತು. ಮೂರು ತಿಂಗಳ ಕಾಲಾವಕಾಶ ಇರುವ ಕಾರಣ ಅದರೊಳಗೆ ಹಿಂಬಾಕಿ ಪಾವತಿಸಿದ್ರೇ, ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ವಿದ್ಯುತ್ ಉಚಿತ ಸೌಲಭ್ಯದ ಪ್ರಯೋಜನ ಪಡೆಯಬಹುದಾಗಿದೆ ಎಂದು ಹೇಳಿದೆ.
ಗ್ರಾಹಕರು ವಿದ್ಯುತ್ ಬಿಲ್ ನ ಹಿಂಬಾಕಿ ಉಳಿಸಿಕೊಂಡಿದ್ದರೂ ಅವರಿಗೆ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ. ಹಿಂಬಾಕಿಯನ್ನು ಸೆ. 30 ರೊಳಗೆ ಪಾವತಿಸಬೇಕು. ಮೂರು ತಿಂಗಳು ಕಾಲಾವಕಾಶ ಇದೆ ಎಂದು ಹೇಳಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


