ವರ್ಗಾವಣೆ ದಂಧೆ ಬಗ್ಗೆ ತಮ್ಮ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟಿರುವ ಹೇಳಿಕೆ ಬಗ್ಗೆ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ ನಾನು ಸಿದ್ದರಾಮಯ್ಯ ಅವರನ್ನು ಕೇಳಲು ಬಯಸುತ್ತೇನೆ. ನಾನು ನಿಮ್ಮ ಪಕ್ಷದ ಜತೆ ಸರಕಾರ ರಚನೆ ಮಾಡಿದ್ದಾಗ ನೀವೆಲ್ಲ ಏನೇನು ಮಾಡಿದಿರಿ ಎನ್ನುವುದು ಗೊತ್ತಿದೆ. ಪೊಗದಸ್ತಾದ ಇಲಾಖೆಗಳನ್ನು ಇಟ್ಟುಕೊಂಡಿದ್ದ ನಿಮ್ಮ ಮಂತ್ರಿಗಳು ಏನು ಮಾಡಿದರು? ಮುಖ್ಯಮಂತ್ರಿಯಾಗಿ ನಾನು ಯಾವೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆಯೇ ಇರಲಿಲ್ಲ. ಎಲ್ಲ ದಂಧೆಗಳು ಯಾರ ಮೂಗಿನಡಿ ನಡೆಯುತ್ತಿದ್ದವು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು ವರ್ಗಾವಣೆ ದಂಧೆಯಲ್ಲಿ ಸರಕಾರ ಮುಳುಗೇಳುತ್ತಿದೆ ಎಂದು ದೂರಿದರು. ಹಣ ಕೊಟ್ಟು ಪೋಸ್ಟ್ ಪಡೆಯಲು ಬಂದವರನ್ನು ನಾನು ದೂರ ಇಟ್ಟಿದ್ದೆ. ಯಲಹಂಕ ತಹಶಿಲ್ದಾರ್ ಹುದ್ದೆಗೆ ಒಂದೂವರೆ ಕೋಟಿ ಕೊಡ್ತೀವಿ ಅಂದವರನ್ನು ಆಚೆ ಇಟ್ಟಿದ್ದೆ. ಇದು ನಾನು ನಡೆಸಿದ ಆಡಳಿತ. ಈಗ ನೋಡಿದರೆ ವೈಎಸ್ ಟಿ ತೆರಿಗೆ ಅಂತ ಇವರ ಶುರು ಮಾಡಿಕೊಂಡಿದ್ದಾರೆ ಎಂದು ಕಟುವಾಗಿ ಟೀಕೆ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


