ಇತ್ತೀಚೆಗೆ ಬಡ ಮಹಿಳೆಯೊಬ್ಬರಿಗೆ ತಾವೇ ಆಪರೇಷನ್ ಮಾಡಿ, ನೆರವಾಗಿದ್ದ ಕುಣಿಗಲ್ ಕ್ಷೇತ್ರದ ಶಾಸಕ ಡಾಕ್ಟರ್ ರಂಗನಾಥ್ ಅವರು ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ…
ಮತದಾರರ ಭರವಸೆ ಉಳಿಸಿಕೊಳ್ಳಲು ಶಾಸಕರು ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದ್ದು, ಶಾಸಕರ ನಡೆ, ಹಳ್ಳಿ ಕಡೆ ಕಾರ್ಯಕ್ರಮ ಆರಂಭಿಸಿದ್ದಾರೆ. ನಾಗಸಂದ್ರ ಗ್ರಾಮಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಶಾಸಕರು ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಹೂಡಿ ಜನರ ಸಮಸ್ಯೆಗಳನ್ನ ಆಲಿಸಿದ್ದಾರೆ.
ಕುಣಿಗಲ್ ತಾಲ್ಲೂಕಿನ ಯಡಿಯೂರು ಹೋಬಳಿಯ ನಾಗಸಂದ್ರ ಗ್ರಾಮದಲ್ಲಿ ಶಾಸಕರ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಸಿದ ಶಾಸಕ ರಂಗನಾಥ್ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ವೇಳೆ ಶಾಸಕರು ಹಾಗೂ ಅಧಿಕಾರಿಗಳು ಬಡವರ ಮನೆಯಲ್ಲಿ ಊಟ ಮಾಡಿ ರಾತ್ರಿ ವಾಸ್ತವ್ಯ ಹೂಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


