ಮಧುಗಿರಿ: ಪಟ್ಟಣದ ಆರಕ್ಷಕ ನಿರೀಕ್ಷಕರ ಕಚೇರಿ ಮುಂಭಾಗದ ರಸ್ತೆಯಲ್ಲಿ ಬೈಕ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ನಡೆದಿದೆ.
ತಾಲೂಕಿನ ಜಿ.ಡಿ.ಪಾಳ್ಯದಿಂದ ಮಧುಗಿರಿ ಮಾರ್ಗವಾಗಿ ತುಮಕೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಆರಕ್ಷಕ ನಿರೀಕ್ಷಕರ ಕಚೇರಿಯ ಮುಂಭಾಗದ ರಸ್ತೆಯಲ್ಲಿ ಎದುರಿನಿಂದ ಬಂದ ಬೈಕ್ ನಡುವೆ ಅಪಘಾತದ ಸಂಭವಿಸಿದೆ.
ಬೈಕ್ ನಲ್ಲಿ ಇಬ್ಬರು ಸವಾರರು ಪ್ರಯಾಣಿಸುತ್ತಿದ್ದು ಹಿಂಬದಿ ಸವಾರನಿಗೆ ಗಂಭೀರವಾಗಿ ಗಾಯಗಳಾಗಿ ಒಂದು ಕಾಲು ಮುರಿದಿದ್ದು ಇನ್ನೊಂದು ಕಾಲಿನ ಮೊಣ ಕಾಲಿಗೆ ತೀವ್ರ ಪೆಟ್ಟಾಗಿದೆ, ಗಾಯಗೊಂಡ ವ್ಯಕ್ತಿಯನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ ಹಾಗೂ ಈ ಘಟನೆಗೆ ಸಂಬಂಧಿಸಿದಂತೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಅಫಘಾತಕ್ಕೆ ಮುಖ್ಯ ಕಾರಣ ಯಾರಿಂದ ತಪ್ಪಾಗಿದೆ ಎಂಬ ಹೆಚ್ಚಿನ ಮಾಹಿತಿ ಪೊಲೀಸ ತನಿಖೆಯಿಂದ ತಿಳಿದು ಬರಬೇಕಿದೆ.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA