ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಈಕೆ ಪತಿ ಹಾಗೂ ಆತನ ಗಲ್‌ರ್ಫ್ರೆಂಡ್ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಏನಿದು ಪ್ರಕರಣ? ಮೊದಲ ಪತಿಗೆ ವಿಚ್ಛೇದನ ನೀಡಿ ಚೇತನ್ ಗೌಡರನ್ನು ಪವಿತ್ರಾ ಎರಡನೇ ಮದುವೆಯಾಗಿದ್ದಳು. ಚೇತನ್ ಕೆಲಸ ಮಡುತ್ತಿದ್ದ ಖಾಸಗಿ ಕಂಪನಿಯೊಂದರಲ್ಲಿಯೇ ಪವಿತ್ರಾ ಕೂಡ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಳು.
ಇತ್ತೀಚೆಗೆ ಮತ್ತೋರ್ವ ಯುವತಿಯ ವಿಚಾರವಾಗಿ ಪತಿ-ಪತ್ನಿ ಮಧ್ಯೆ ಜಗಳವಾಗುತ್ತಿತ್ತು. ಈ ಬಗ್ಗೆ ಪವಿತ್ರಾ ತನ್ನ ತಾಯಿ ಪದ್ಮಮ್ಮ ಬಳಿ ತಿಳಿಸಿದ್ದಳು. ಬಳಿಕ ಮನನೊಂದು ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ. ಮಗಳ ವಾಟ್ಸಾಪ್ ಸ್ಟೇಟಸ್ ನಲ್ಲಿ ಡೆತ್‌ನೋಟ್ ನೋಡಿ ತಾಯಿ, ಮಗಳ ಮನೆಗೆ ಓಡಿ ಬಂದಾಗ ಸಾವನ್ನಪ್ಪಿರೋದು ಬೆಳಕಿಗೆ ಬಂದಿದೆ.
ಮೃತಳ ತಾಯಿ ಪದ್ಮಮ್ಮರ ದೂರಿನನ್ವಯ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆ ಪ್ರಚೋದನೆ) ಅಡಿ ದೂರು ದಾಖಲಾಗಿದೆ. ಸದ್ಯ ಕೆಂಗೇರಿ ಠಾಣೆಯಲ್ಲಿ ಚೇತನ್ ಗೌಡ ಹಾಗೂ ಮತ್ತೋರ್ವ ಯುವತಿ ವಿರುದ್ಧ ಎಫ್. ಐ. ಆರ್ ದಾಖಲಾಗಿದೆ. ಇತ್ತ ಡೆತ್ ನೋಟ್ ಹಾಗೂ ಮೃತಳ ಎರಡು ಪೋನ್ ವಶಕ್ಕೆ ಪಡೆದು ವಿಚಾರಣೆ ನಡೆಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


