ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಕೃಷ್ಣಮೂರ್ತಿ ಸಿ. ಡಿ (64) ಮೃತರು. ಶನಿವಾರ ಸಂಜೆ ನಡೆದಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೃಷ್ಣಮೂರ್ತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಭಾನುವಾರ ಮೃತಪಟ್ಟಿದ್ದಾರೆ ಎಂದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು
ಹೇಳಿದರು.
ಕೃಷ್ಣಮೂರ್ತಿ ಅವರು ಟಿವಿಎಸ್ ಮೊಪೆಡ್ (ಕೆಎ 04 ಇಯು 9717) ವಾಹನದಲ್ಲಿ, ಈಸ್ಟ್ ವೆಸ್ಟ್ ಕಾಲೇಜು ಕಡೆಯಿಂದ ಬ್ಯಾಡರಹಳ್ಳಿ ಠಾಣೆ ಕಡೆಗೆ ಹೊರಟಿದ್ದರು. ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಜೈ (24), ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ತಮ್ಮ ಹೊಂಡಾ ಆ್ಯಕ್ಟಿವಾ ದ್ವಿಚಕ್ರ ವಾಹನ (ಕೆಎ 02 ಎಚ್‌ಕೆ 4120) ಚಲಾಯಿಸಿದ್ದ. ಇದರಿಂದಾಗಿ ದ್ವಿಚಕ್ರ ವಾಹನ, ಟಿವಿಎಸ್ ಮೊಪೆಡ್ ಡಿಕ್ಕಿ ಹೊಡೆದಿತ್ತು.
ಕೃಷ್ಣಮೂರ್ತಿ, ಜೈ ಹಾಗೂ ಆತನ ವಾಹನದ ಹಿಂಬದಿಯಲ್ಲಿದ್ದ ಕಾಲು ಉರ್ವಾ (31) ಗಾಯಗೊಂಡಿದ್ದರು. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೈ ಹಾಗೂ ಉರ್ವಾ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


