ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ರಾಜ್ಯ ಸರ್ಕಾರ ಎಸ್ ಐಟಿ (ವಿಶೇಷ ತನಿಖಾ ತಂಡ)ವನ್ನ ರಚನೆ ಮಾಡಿದೆ. ಅದರ ಮುಖ್ಯಸ್ಥರನ್ನನಾಗಿ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ನೇಮಕ ಮಾಡೊದ್ದು, ಇವರ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ತಂಡದಲ್ಲಿ ಡಿಐಜಿ ವಂಶಿಕೃಷ್ಣ, ಡಿಸಿಪಿ ಅನೂಪ್ ಶೆಟ್ಟಿ, ಎಸ್ಪಿ ಶರತ್ ಸಹ ಇರಲಿದ್ದಾರೆ.
ತಂಡ ರಚನೆಯಾಗುತ್ತಿದ್ದಂತೆ ಸಿಐಡಿಯಲ್ಲಿ ಎಸ್ ಐಟಿ ಅಧಿಕಾರಿಗಳ ಜೊತೆ ಸಿಐಡಿ ಡಿಜಿ ಎಂ. ಎ. ಸಲೀಂ ಸಭೆ ನಡೆಸಿದ್ದಾರೆ. ತನಿಖೆಯ ರೂಪುರೇಷಗಳ ಬಗ್ಗೆ ಚರ್ಚೆ ನಡೆಸಿದ್ದು, ಫೈಲ್ ವರ್ಗಾವಣೆ, ಕೆಳಹಂತದಿಂದ ಯಾವೆಲ್ಲ ಅಧಿಕಾರಿಗಳು ತಂಡದಲ್ಲಿ ಇರಬೇಕು ಎಂಬುದರ ಚರ್ಚೆ ಮಾಡಲಾಗಿದೆ. ಈಗಾಗಲೇ ಸಿಸಿಬಿಯಿಂದ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಮೊದಲು ನ್ಯಾಯಾಲಯದ ಅನುಮತಿ ಪಡೆದು ತನಿಖೆ ಮುಂದುವರೆಸಲು ಸಿದ್ಧತೆ ನಡೆಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


