ತುರುವೇಕೆರೆ : 2023-24ನೇ ಸಾಲಿನ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 7ರಂದು ಪಟ್ಟಣದ ಚೌಧ್ರಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಡಿ.ಕೆ. ನಾಗರಾಜು ತಿಳಿಸಿದ್ದಾರೆ.
ಪಟ್ಟಣದಲ್ಲಿ ಪತ್ರಿಗಾಗುವಷ್ಟ ಏನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷವೂ ಸಹ ಜಿಸಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಮ್ಮ ಸಂಸ್ಥೆ ನೂರಾರು ವಿಧವಾದ ಸೇವಾ ಚಟುವಟಿಕೆಗಳನ್ನು ನಡೆಸಿ ಉತ್ತಮ ಪ್ರಶಸ್ತಿಯನ್ನು ಸಹ ಪಡೆದುಕೊಂಡಿದೆ ಎಂದರು.
2023 — 24 ರ ಅವಧಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಲೋಕೇಶ್ ಮಾತನಾಡಿ ನನ್ನ ಪ್ರಸಕ್ತ ಅವಧಿಯಲ್ಲಿ ಪ್ರತಿ ತಿಂಗಳು ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡುವ ಜೊತೆಗೆ ಗಿಡಗಳನ್ನು ನೆಡುವುದು ಶೈಕ್ಷಣಿಕ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ವಿಚಾರ ಸಂಕಿರಣ ಕ್ಯಾನ್ಸರ್ ಮತ್ತು ಡಯಾಬಿಟಿಸ್ ಬಗ್ಗೆ ಜಾಗೃತಿ ಜಾಥ ಅನಾಥರಿಗೆ ರಕ್ಷಣೆ ಮತ್ತು ಮೂಲಭೂತ ಸೌಕರ್ಯವನ್ನು ಒದಗಿಸುವ ಪ್ರಯತ್ನ ಮಾಡಲಾಗುವುದು ಹಾಗೆಯೇ ಶಾಲೆಗಳಿಗೆ ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಲಾಗುವುದು ತಾಲೂಕಿನಲ್ಲಿ ಅತ್ಯುತ್ತಮವಾಗಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳನ್ನು ಗುರುತಿಸಿ ಲ್ಯಾಪ್ ಟಾಪ್ ವಿತರಣೆ ಹಾಗೂ ಎಂದಿನಂತೆ ತಮ್ಮ ಸಂಸ್ಥೆಯ ಮೂಲ ಉದ್ದೇಶವಾಗಿರುವ ನೇತ್ರ ಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ತಂಡ ಜುಲೈರಂದು ಶುಕ್ರವಾರ ಪಟ್ಟಣದ ಚೌದ್ರಿ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿದ್ದು ಅಧಿಕಾರ ಪದಗ್ರಹಣ ಸಮಾರಂಭವನ್ನು ಶಾಸಕ ಎಂ ಟಿ ಕೃಷ್ಣಪ್ಪನವರು ಉದ್ಘಾಟಿಸಲಿದ್ದು ಪ್ರಮಾಣವಚನವನ್ನು ಮಾಜಿ ಜಿಲ್ಲಾ ರಾಜಪಾಲ ಲಯನ್ ಜಿ. ಶ್ರೀನಿವಾಸ್ ನೆರವೇರಿಸಲಿದ್ದಾರೆ ಅಧ್ಯಕ್ಷತೆಯನ್ನು ವಿಕಟ ಪೂರ್ವ ಅಧ್ಯಕ್ಷ ಜಿ ಸಿ ಶ್ರೀನಿವಾಸ್ ವೈಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಪ್ರಾಂತ್ಯ ಅಧ್ಯಕ್ಷ ಜಿ ಗುರುಪ್ರಸಾದ್ ವಲಯದ ಜೆ ಮಿಹಿರಾಕುಮಾರ್. ಟ್ರಸ್ಟ್ ಅಧ್ಯಕ್ಷ ಪಿ ಎಚ್ ಧನಪಾಲ್ ಹಾಗೂ ಹಲವರು ಉಪಸ್ಥಿತರಿದ್ದು ಇದೇ ಸಂದರ್ಭದಲ್ಲಿ ಶಾಸಕ ಎಂ. ಟಿ. ಕೃಷ್ಣಪ್ಪ. ಡಾ. ಆಶಾ ಚೌದ್ರಿ ಮತ್ತು ಚೌದ್ರಿ ನಾಗೇಶ್ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ ಅಧ್ಯಕ್ಷ ಪಿ ಎಚ್ ಧನಪಾಲ್. ಡಾ. ನಾಗರಾಜ್. ಗಂಗಾಧರ ದೇವರ ಮನೆ. ಎಸ್ .ಎಂ. ಕುಮಾರಸ್ವಾಮಿ. ಹಾಗೂ ವಿವಿಧ ಪದಾಧಿಕಾರಿಗಳಾದ ಟಿ.ವಿ. ಮಹೇಶ್. ಮಿಹಿರ ಕುಮಾರ್. ಬಸವರಾಜು. ರವಿಕುಮಾರ್. ಸುಮಾ ಮಲ್ಲಿಕ್. ವೆಂಕಟೇಶ್ ಶೆಟ್ಟಿ. ಶಿವಾನಂದ್. ಸುನಿಲ್ ಬಾಬು. ಪ್ರದೀಪ್ ಗುಪ್ತ. ರಂಗನಾಥ್. ಪ್ರಸನ್ನ. ಮನು. ಸೇರಿದಂತೆ ಇತರರು ಇದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA