ರಸ್ತೆಯನ್ನು ಅಕ್ರಮವಾಗಿ ಅಗೆದು ಕುಡಿಯುವ ನೀರು ಹಾಗೂ ಒಳಚರಂಡಿ ಮಾರ್ಗಕ್ಕೆ ಹಾನಿ ಮಾಡಿರುವ ಪ್ರಕರಣದಲ್ಲಿ ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳ ವಿರುದ್ಧ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಜಿಯೊ ಡಿಜಿಟಲ್ ಫೈಬರ್ ಕಂಪನಿಯ ನಿರ್ದೇಶಕರಾದ ನಟರಾಜನ್ ಜ್ಞಾನಸ್ಕಂದನ್ ತಂಜೂರ, ಶ್ರೀಧರ್ ವೈದ್ಯಾನಂದ್, ಧ್ರುವ್ ಕುಮಾರ್ ತಾಯಲ್ ಹಾಗೂ ಕೃತ್ಯಕ್ಕೆ ಸಹಕರಿಸಿ ಸರ್ಕಾರಕ್ಕೆ ನಂಬಿಕೆ ದ್ರೋಹ ಎಸಗಿರುವ ಬಿಬಿಎಂಪಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಾಶ್, ಜಲಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಾಯಕ್ ವಿರುದ್ಧ ಸ್ಥಳೀಯ ನಿವಾಸಿಯೊಬ್ಬರು ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ದೂರಿನ ವಿವರ: ‘ಅರಕೆರೆಯ ಬ್ರಿಗೇಡ್ ಮಿಲೇನಿಯಂ ಮುಖ್ಯರಸ್ತೆ, ಸೆಂಚುರಿ ಪ್ರಗತಿ ಅಪಾರ್ಟ್‌ಮೆಂಟ್ ಸಮುಚ್ಚಯ ಮುಂಭಾಗ ಹಾಗೂ ಸುತ್ತಮುತ್ತ ಹೊಸದಾಗಿ ಡಾಂಬರ್ ರಸ್ತೆ ನಿರ್ಮಿಸಲಾಗಿದೆ. ಬಿಬಿಎಂಪಿಯಿಂದ ಯಾವುದೇ ಅನುಮತಿ ಪಡೆಯದೇ ಜಿಯೊ ಡಿಜಿಟಲ್ ಫೈಬರ್ ಕಂಪನಿಯವರು, ಕೇಬಲ್ ಅಳವಡಿಸಲು ರಸ್ತೆಯನ್ನು ಅಕ್ರಮವಾಗಿ ಅಗೆದಿದ್ದಾರೆ. ಇದರಿಂದ ಕುಡಿಯುವ ನೀರಿನ ಪೈಪ್ ಹಾಗೂ ಒಳಚರಂಡಿ ವ್ಯವಸ್ಥೆಗೆ ಧಕ್ಕೆಯಾಗಿದೆ .
ಜಿಯೊ ಕಂಪನಿ ಕೃತ್ಯದಿಂದ ಕುಡಿಯುವ ನೀರಿನ ಜೊತೆ ಒಳಚರಂಡಿ ನೀರು ಸೇರಿದೆ. ಇಂಥ ನೀರು ಕುಡಿದು ಸ್ಥಳೀಯರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಜೊತೆಗೆ, ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳು ಸಹ ಯಾವುದೇ ಕ್ರಮ ಕೈಗೊಳ್ಳದೇ ಸರ್ಕಾರಕ್ಕೆ ನಂಬಿಕೆದ್ರೋಹ ಮಾಡುತ್ತಿದ್ದಾರೆ’ ಎಂದು ದೂರಿನಲ್ಲಿ ಹೇಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


