ಬಿಬಿಎಂಪಿ ವ್ಯಾಪ್ತಿಯಲ್ಲಿ 110 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮವನ್ನು ಕೈಗೊಂಡಿದ್ದು, ಸುಮಾರು 100 ಕೊಳವೆಬಾವಿಗಳನ್ನು ಕೊರೆಯಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಕುಡಿಯುವ ನೀರು ಸರಬರಾಜು ಜವಾಬ್ದಾರಿ ಬಿಬಿಎಂಪಿಯದ್ದು, ಅಲ್ಲದಿದ್ದರೂ, ಹೊರಭಾಗದ 110 ಹಳ್ಳಿಗಳಲ್ಲಿ ಕಾವೇರಿ ನೀರು ಪೂರೈಕೆ ಇನ್ನೂ ಸಾಧ್ಯವಾಗಿಲ್ಲ. ಹೀಗಾಗಿ ಅಲ್ಲಿನ ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ತುರ್ತು ಕಾಮಗಾರಿಯಡಿ 110 ಕೋಟಿ ವೆಚ್ಚ ಮಾಡಲು ನಿರ್ಧರಿಸಲಾಗಿದೆ. ನಿರ್ಲ್ಲಿ ರಧ ನೀರಿನ ವ್ಯವಸ್ಥೆ ಮಾಡಲಾಗುತ್ತದೆ. ಪ್ರತಿ ಕೊಳವೆಬಾವಿ ಸುಮಾರು *8 ಲಕ್ಷ ವೆಚ್ಚವಾಗಲಿದೆ. ಯಲಹಂಕ, ದಾಸರಹಳ್ಳಿ, ಆರ್. ಆರ್. ನಗರ, ಬೊಮ್ಮನಹಳ್ಳಿ ವಲಯಗಳಲ್ಲಿ ಅಗತ್ಯಕ್ಕನುಸಾರವಾಗಿ ಕೊಳವೆಬಾವಿ ಕೊರೆಯಲಾಗುತ್ತದೆ ಎಂದರು.
ಬೆಂಗಳೂರು ನಗರ ಭಾಗದಲ್ಲಿ ನೀರು ಪೂರೈಕೆ ಜವಾಬ್ದಾರಿ ಬಿಡಬ್ಲ್ಯೂಎಸ್‌ಎಸ್‌ಬಿಯದ್ದಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮಳೆಗಾಲಕ್ಕೆ ಸಿದ್ಧತೆ: ನಗರದಲ್ಲಿ 198 ಸೂಕ್ಷ್ಮ ಪ್ರದೇಶಗಳಲ್ಲಿ ಜಲಾವೃತವಾಗುವುದನ್ನು ಗುರುತಿಸಲಾಗಿದೆ. ಇದರಲ್ಲಿ ಶೇ 80ರಷ್ಟು ಪ್ರದೇಶದಲ್ಲಿ ಸಮಸ್ಯೆಯನ್ನು ನಿವಾರಿಸಲಾಗಿದೆ ಎಂದು ತುಷಾರ್ ಗಿರಿನಾಥ್ ಹೇಳಿದರು.
ಅತಿಹೆಚ್ಚು ಮಳೆ ಬಂದರೆ ಸಮಸ್ಯೆ ಉಂಟಾಗುವುದು ಸಹಜ. ಆದರೂ ಅಂತಹ ಸಮಸ್ಯೆಯನ್ನು ನಿವಾರಿಸಲು ಸಾಕಷ್ಟು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕಂಟ್ರೋಲ್ ರೂಂ ಸರ್ವಸನ್ನದ್ಧವಾಗಿದೆ ಎಂದರು. ರಾಜಕಾಲುವೆ ಒತ್ತುವರಿ ಕಾರ್ಯಾಚರಣೆ ನಡೆಯುತ್ತಲೇ ಇದೆ. 118 ಪ್ರಕರಣಗಳು ನ್ಯಾಯಾಲಯದಲ್ಲಿವೆ. ಇದರಲ್ಲಿ 50 ಕಡೆ ಕಾಲುವೆ ಇಲ್ಲ. ಅದರ ಮಾರ್ಗ ಬದಲಾಯಿಸಲಾಗಿದೆ. ಅಲ್ಲಿ ನೀರಿನ ಸಮಸ್ಯೆ ಉಂಟಾಗುವುದಿಲ್ಲ. ಹೀಗಾಗಿ ಅದರ ತೆರವಿಗೆ ಹೆಚ್ಚಿನ ಆದ್ಯತೆ ನೀಡಿಲ್ಲ. ಇನ್ನುಳಿದ ಸುಮಾರು 50 ಕಡೆ ನೀರು ಪಂಪ್ ಮಾಡಲು ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


