ಕಟ್ಟಡ ಕಾಮಗಾರಿ ನಡೆಯುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ 50 ಮೀಟರ್ಗಳಷ್ಟು ತಾಮ್ರದ ಕೇಬಲ್ ವೈರ್ ಕದಿಯುತ್ತಿದ್ದ ಹೌಸ್ ಕೀಪಿಂಗ್ ಸಿಬ್ಬಂದಿಯೊಬ್ಬರು ರೆಸ್ಟ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಕೇಬಲ ಕದ್ದ ರಾಹುಲ್ ಕುಮಾರ್ ವಿರುದ್ಧ ಕೆಐಎ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದ್ದು, ಇಂದು ಸೇವೆಯಿಂದ ವಜಾಗೊಳಿಸಲಾಗಿದೆ. ವಿಮಾನ ನಿಲ್ದಾಣದ ಪೊಲೀಸರ ಪ್ರಕಾರ, ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು 2 ನಡುವೆ ಮಲ್ಟಿ ಮಾಡಲ್ ಟ್ರಾಸ್ಪೋರ್ಟ್ ಹಬ್(ಎಂಎಂಟಿಎಚ್) ನಿರ್ಮಿಸುತ್ತಿರುವ ಗೋದ್ರೇಜ್ ಮತ್ತು ಬಾಯ್ಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿಯ ಸೆಕ್ಷನ್ 379(ಕಳ್ಳತನ) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಎಸ್ಎಲ್ ವಿ ಸರ್ವಿಸೆಸ್, ತನ್ನ ಹೌಸ್ ಕೀಪಿಂಗ್ ಸಿಬ್ಬಂದಿಯಾಗಿದ್ದ ರಾಹುಲ್ ಕುಮಾರ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಿಹಾರ ಮೂಲದ ಕುಮಾರ್ ಮಂಗಳವಾರ ಸಂಜೆ 5. 30 ರ ಸುಮಾರಿಗೆ ಕೇಬಲ್ ಅನ್ನು ಹೊತ್ತುಕೊಂಡು ನಿರ್ಮಾಣ ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ವಿಮಾನ ನಿಲ್ದಾಣದ ನಿರ್ವಾಹಕರು, ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋಟ್‌್ರ ಲಿಮಿಟೆಡ್ ನ ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ಅದರ ಬಗ್ಗೆ ಆತನನ್ನು ಕೇಳಿದಾಗ, ತನ್ನ ಬಟ್ಟೆ ಒಣಗಿಸಲು ಈ ಕೇಬಲ್ ಬೇಕಾಗಿದೆ ಎಂದು ಹೇಳಿದ್ದಾನೆ. ಈ ಬಗ್ಗೆ ಭದ್ರತಾ ಸಿಬ್ಬಂದಿ ಗೋದ್ರೇಜ್ಞೆಗೆ ಮಾಹಿತಿ ನೀಡಿದ್ದಾರೆ. ಅವರು ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಕೇಬಲ್ನ ಮೌಲ್ಯ ಕೇವಲ 3000 ರೂ. ಆದರೆ, ಭವಿಷ್ಯದಲ್ಲಿ ಹೆಚ್ಚು ಬೆಲೆಬಾಳುವ ವಸ್ತುಗಳು ಕಳ್ಳತನವಾಗುವ ಸಾಧ್ಯತೆಯಿದೆ. ಆದ್ದರಿಂದ, ಅವರು ಕೇಸ್ ದಾಖಲಿಸಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ. ಕೇಬಲ್ಗಳಲ್ಲಿನ ತಾಮ್ರವನ್ನು ಹೊರ ತೆಗೆದು ಅದನ್ನು ಸ್ಕ್ಯಾಪ್ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತದೆ. ಹೀಗಾಗಿ ಕುಮಾರ್ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಸದ್ಯ ಆರೋಪಿ ಜಾಮೀನಿನ ಮೇಲೆ ಹೊರಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


