ಬೆಂಗಳೂರು ಸೇರಿದಂತೆ ಹಲವಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನಜೀವನ ಈಗಾಗ್ಲೆ ಅಸ್ತವ್ಯಸ್ಥವಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಹಾವೇರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


