ಕೊಮ್ಮಘಟ್ಟ ಸುತ್ತಲಿನ ಬಡಾವಣೆಗಳ ನಿವಾಸಿಗಳು, ಬಿಬಿಎಂಪಿ ವ್ಯಾಪ್ತಿಯ ನಿವಾಸಿಗಳು ಮನೆಯ ಕಸ, ತ್ಯಾಜ್ಯವನ್ನು ಕವರ್‌ನಲ್ಲಿ ಕಟ್ಟಿ ದ್ವಿಚಕ್ರವಾಹನಗಳಲ್ಲಿ ಬಂದು ರಸ್ತೆಯ ಬದಿಯಲ್ಲಿ ಬಿಸಾಡುತ್ತಿದ್ದಾರೆ. ಕಸ, ಕೋಳಿ, ಮೇಕೆ, ಕುರಿಗಳ ತ್ಯಾಜ್ಯ, ಲಿವರ್, ಮೂಳೆ ಸೇರಿ ಕೊಳೆತ ದುರ್ವಾಸನೆ ಬೀರುತ್ತಿದೆ.
ಇದರ ಜೊತೆಗೆ ಮದ್ಯದ ಖಾಲಿ ಬಾಟಲ್, ಪ್ಲಾಸ್ಟಿಕ್ ಕವರ್, ಆಸ್ಪತ್ರೆಯ ನಿರುಪಯುಕ್ತ ವಸ್ತುಗಳೂ ಬಂದು ಬೀಳುತ್ತಿವೆ. ಕೊಳೆತ ತರಕಾರಿ, ಹಣ್ಣು, ಹೂವು, ಮಾವಿನ ಹಣ್ಣು, ಹಲಸಿನ ಹಣ್ಣು, ಮಾಂಸದ ತುಂಡುಗಳನ್ನು ತಂದು ಸುರಿಯುವುದರಿಂದ ಸೊಳ್ಳೆ, ನೊಣಗಳ ಹಾವಳಿ ಹೆಚ್ಚಾಗಿದೆ. ಚೀಲಗಳಲ್ಲೂ ಕಸವನ್ನು ತಂದು ಹಾಕಲಾಗುತ್ತಿದೆ.
ಸಾಂಕ್ರಾಮಿಕ ರೋಗದ ಭಯದಿಂದ ಜೀವನ ನಡೆಸಬೇಕು. ಗಾಳಿ ಬೀಸಿದಾಗ ದುರ್ವಾಸನೆಯ ವಿಷಕಾರಿ ಗಾಳಿ ಬೀಸುತ್ತಿದೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


