ರಾಜ್ಯದಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗೆ ಆಗುತ್ತಿರುವ ಸಮಸ್ಯೆಗೆ ಪರಿಹಾರ ಒದಗಿಸಲು ಶಾಶ್ವತವಾದ ಕಾರ್ಯಪಡೆ ರಚಿಸಬೇಕು ಎಂದು ಬಿಜೆಪಿಯ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಗುರುವಾರ ಆಗ್ರಹಿಸಿದರು.
ಕಾಂಗ್ರೆಸ್ ನ ಅಲ್ಲಮಪ್ರಭು ಪಾಟೀಲ ಶೂನ್ಯವೇಳೆಯಲ್ಲಿ ಬರ ಪರಿಸ್ಥಿತಿ ಕುರಿತು ಪ್ರಸ್ತಾಪಿಸಿ, ‘ಕುಡಿಯುವ ನೀರಿನ ಕೊರತೆ ತೀವ್ರವಾಗಿದೆ. ನೀರು ಪೂರೈಕೆಗೆ ಹೆಚ್ಚಿನ ಅನುದಾನ ಒದಗಿಸಬೇಕು’ ಎಂದು ಮನವಿ ಮಾಡಿದರು. ಕಾಂಗ್ರೆಸ್‌ನ ಬಿ. ಆರ್. ಪಾಟೀಲ, ಜೆಡಿಎಸ್‌ನ ಶಾರದಾ ಪೂರ್ಯಾನಾಯ್ಕ ದನಿಗೂಡಿಸಿದರು.
ಆಗ ಮಧ್ಯಪ್ರವೇಶಿಸಿದ ಬೊಮ್ಮಾಯಿ, ‘ಮಳೆ ಕೊರತೆಯಿಂದ ಕುಡಿಯುವ ನೀರಿನ ಕೊರತೆ ಜತೆಯಲ್ಲೇ ಕೃಷಿ ಚಟುವಟಿಕೆಗಳಿಗೆ ತೀವ್ರ ಸಮಸ್ಯೆ ಆಗುತ್ತಿದೆ. ಪ್ರತಿ ವರ್ಷವೂ ಮಳೆ ಕೊರತೆ ಆದಾಗ ಈ ಸನ್ನಿವೇಶ ಸೃಷ್ಟಿಯಾಗುತ್ತಿದೆ. ಬಿತ್ತನೆ ಮಾಡಿದ ಬೀಜ ಮೊಳೆಕೆ ಒಡೆಯದಿದ್ದರೆ ಪರಿಹಾರ ಕೊಡುವ ವ್ಯವಸ್ಥೆ ಆಗಬೇಕು. ಶಾಶ್ವತ ಕಾರ್ಯಪಡೆ ರಚಿಸಿ, ಪ್ರತಿ ಜಿಲ್ಲೆಗೆ ತಲಾ 7 50 ಲಕ್ಷ ಅನುದಾನ ಒದಗಿಸಬೇಕು’ ಎಂದು ಒತ್ತಾಯಿಸಿದರು.
‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಎಲ್ಲ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗೆ ತಲಾ ? 1 ಕೋಟಿ ಅನುದಾನ ಒದಗಿಸಲಾಗಿದೆ. 193 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ. 339 ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ನೀರು ಒದಗಿಸಲಾಗುತ್ತಿದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಮಳೆ ಕೊರತೆ ಆಗಿರುವುದರಿಂದ ಬಿತ್ತನೆ ಆಗಿಲ್ಲ. ಈಗ ಮಳೆ ಆಗುತ್ತಿರುವುದರಿಂದ ಕೃಷಿ ವಿಮೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲು ಕೇಂದ್ರ ಸರ್ಕಾರ ಒಪ್ಪಿದೆ. ಬರ ಘೋಷಣೆ ಕುರಿತು ಜುಲೈ 15ರ ಬಳಿಕ ತೀರ್ಮಾನಿಸಲಾಗುವುದು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


