ಸ್ಪೀಕರ್ ಖಾದರ್ ಕನ್ನಡದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ಸ್ಪೀಕರ್ ಕನ್ನಡ ಬಗ್ಗೆ ಚರ್ಚೆ ಹಿನ್ನೆಲೆ ಯು.ಟಿ.ಖಾದರ್ ಮಾತನಾಡುತ್ತ, ಯತ್ನಾಳ್ ಪದೇ ಪದೆ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ.
ನನ್ನ ಕನ್ನಡ ಹೆಚ್ಚು ಕಡಿಮೆ ಇದೆ, ಆದ್ರೆ ನಮ್ಮ ಪ್ರೀತಿಯ ಭಾಷೆ. ಕನ್ನಡ ಪ್ರೀತಿ, ಸೋದರತೆ, ಸಾಮರಸ್ಯದ ಭಾಷೆ. ಅದಕ್ಕೆ ನಾನು ಕೃತಜ್ಞತೆ ಹೇಳುತ್ತಿದ್ದೇನೆ ಎಂದರು.
ಈ ವೇಳೆ ಮಧ್ಯಪ್ರವೇಶಿಸಿದ BJP ಶಾಸಕ ಬಸನಗೌಡ ಯತ್ನಾಳ್, ಸಮಸ್ಯೆ ಏನೆಂದರೆ ನಮ್ಮ ಕನ್ನಡ ಬೇರೆ, ಹೈದರಾಬಾದ್ ಕನ್ನಡ ಬೇರೆ. ಮೈಸೂರು ಕನ್ನಡ ಬೇರೆ, ಮಂಗಳೂರು ಕನ್ನಡ ಬೇರೆ, ಮುಂಬೈ ಕನ್ನಡ ಬೇರೆ, ನಮಗೆ ನಿಮ್ಮ ಭಾಷೆ ಅರ್ಥ ಆಗಬೇಕು, ಅದಕ್ಕೆ ಆ್ಯಪ್ ಹಾಕಿಕೊಡಿ. ಮೊಬೈಲ್ನಲ್ಲಿ ಯುಎಸ್ ಇಂಗ್ಲಿಷ್, ಇಂಗ್ಲೆಂಡ್ ಇಂಗ್ಲಿಷ್ ಇದ್ದ ಹಾಗೆ. ಲೋಕಸಭೆಯಲ್ಲಿ ಹಿಂದಿ ಟು ಕನ್ನಡ, ಕನ್ನಡ ಟು ಹಿಂದಿ ಇದ್ದ ಹಾಗೆ ಸ್ಪೀಕರ್ ಟು ಕನ್ನಡ ಆ್ಯಪ್ ಮಾಡಿ ಎಂದು ಕಾಲೆಳೆದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


