ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ವ್ಯಾಪಕ ಮಳೆಯಾಗುತ್ತಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಜೊತೆ ಸಂಪರ್ಕದಲ್ಲಿದ್ದು ಈ ಕೆಳಕಂಡ ಅವಶ್ಯಕತೆ ಹಾಗೂ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
1. ಮಳೆ ನೀರಿನಿಂದ ಅನಾಹುವಾಗಬಹುದಾದಂತಹ ತಗ್ಗು ಪ್ರದೇಶ, ಕೆರೆ, ನದಿ ತೀರಗಳಲ್ಲಿ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದು.
2. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಗತ್ಯ ಸೂಚನೆಗಳನ್ನು ನೀಡುವುದು.
3. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವುದು. ಯಾವುದಾದರೂ ಲೋಪ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ನೇರ ಹೊಣೆಗಾರರಾಗಿದ್ದು, ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು.
4. ಮಳೆಯಿಂದ ಸಂಭವನೀಯ ಅನಾಹುತವಾಗುವ ಪ್ರದೇಶಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಅವರ ಕಾರ್ಯನಿರ್ವಹಣೆಯ ಮೇಲ್ವಿಚಾರಣೆ ನಿರ್ವಹಿಸುವುದು.
5. ಈಗಾಗಲೇ ಸ್ಥಾಪಿಸಿರುವ ಕಾಳಜಿ ಕೇಂದ್ರಗಳನ್ನು ಮೇಲ್ವಿಚಾರಣೆ ನಡೆಸುವುದು. ಅವಶ್ಯವಿದ್ದಲ್ಲಿ ಮತ್ತಷ್ಟು ಕಾಳಜಿ ಕೇಂದ್ರಗಳನ್ನು ತೆರೆಯುವುದು.
6. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ತುರ್ತು ಸೇವೆ ಉಚಿತ ದೂರವಾಣಿ ಕರೆಯ (Toll Free no) ಸೇವೆಯಲ್ಲಿ ಯಾವುದೇ ವ್ಯತ್ಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವುದು.
7. ಪರಿಸ್ಥಿತಿಯನ್ನು ಅವಲೋಕಿಸಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲು ಸಂಬಂಧಿಸಿದವರಿಗೆ ಸೂಚನೆ ನೀಡುವುದು.
8. ನದಿ ಮತ್ತು ಸಮುದ್ರ ತೀರಕ್ಕೆ ಪ್ರವಾಸಿಗರು ತೆರಳದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು.
9. ಪೊಲೀಸ್ ಇಲಾಖೆ, ಮೆಸ್ಕಾಂ, ಮೀನುಗಾರಿಕಾ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಸಣ್ಣ ನಿರಾವರಿ, ಪಂಚಾಯತ್‌ರಾಜ್, PWD ಇತ್ಯಾದಿ ಇಲಾಖೆಗಳ ಜೊತೆ ನೇರ ಸಮನ್ವಯತೆಯನ್ನು ಸಾಧಿಸಿ ಮಳೆಯಿಂದ ಆಗಬಹುದಾದ ಸಂಭವನೀಯ ಹಾನಿಯನ್ನು ತಡೆಗಟ್ಟಲು ಸಮರೋಪಾಧಿಯಲ್ಲಿ ಕ್ರಮ ಕೈಗೊಳ್ಳುವುದು. ಹೀಗೆ ಮೇಲಿನ ಸೂಚನೆಗಳನ್ನು ಜಿಲ್ಲಾಡಳಿತವು ಚಾಚೂ ತಪ್ಪದೆ ಪಾಲಿಸಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


