ವಿಶ್ವವಿದ್ಯಾಲಯಗಳಲ್ಲಿ/ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕಗಳನ್ನು ಪಡೆಯದಿರುವ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಯಿಂದ ಯಾವುದೇ ಕಡ್ಡಾಯ ಶುಲ್ಕ ಪಾವತಿ ಮಾಡುವಂತೆ ಒತ್ತಾಯ ಮಾಡಬಾರದು ಎಂದು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಶಿವಶಂಕರ್ ನಾಯಕ್. ಎಲ್ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.
ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ. 2. 50 ಲಕ್ಷ ಒಳಗಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ ಎಂದು ಹೇಳಿದೆ.
ಸರ್ಕಾರ ಆಯಾಯ ಕೋರ್ಸಿಗೆ ನಿಗದಿ ಮಾಡಿರುವ ಕಾಲೇಜು ಶುಲ್ಕವನ್ನು ಮಾರುಪಾವತಿ ಮಾಡಲಾಗುತ್ತಿದೆ ಹಾಗೂ ಸದರಿ ಮೊತ್ತವನ್ನು ವಿದ್ಯಾರ್ಥಿಯು ತನ್ನ ಖಾತೆಗೆ ಜಮೆಯಾದ ನಂತರದಲ್ಲಿ ಸಂಬಂಧಪಟ್ಟ ಕಾಲೇಜಿಗೆ ಪಾವತಿಸಲು ಸೂಚಿಸಲಾಗಿರುತ್ತದೆ ಎಂದು ವಿವರಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


