ಬೆಂಗಳೂರು: ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ 80 ಮಂದಿ ಕನ್ನಡಿಗರು ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸಿ ಸುರಕ್ಷಿತವಾಗಿ ಮರಳಿ ಕರೆತರಲು ಅಗತ್ಯ ಎಲ್ಲಾ ನೆರವನ್ನು ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗದಗದಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್‌ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ತಿಳಿಸಿದ್ದಾರೆ
ಗದಗದಿಂದ ಅಮರನಾಥ ಯಾತ್ರೆಗೆ 23 ಯಾತ್ರಿಕರು ಹೋಗಿದ್ದರು. ದೇವರ ದರ್ಶನ ಪಡೆದು ಮರಳಿ ಬರುವ ವೇಳೆ ಗುಡ್ಡ ಕುಸಿತವಾಗಿ ರಸ್ತೆ ಮಧ್ಯೆ ಸಿಲುಕಿದ್ದಾರೆ. ಅಮರನಾಥದಿಂದ ಸುಮಾರು 10 ಕಿಮೀ ದೂರದಲ್ಲಿ ಗುಡ್ಡ ಕುಸಿತವಾಗಿದೆ. ರಸ್ತೆ ಮಧ್ಯೆ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ.
ಮಿಲಿಟರಿ ಪಡೆಯಿಂದ ಯಾತ್ರಿಕರನ್ನು ಮರಳಿ ಕರೆತರಲು ಪ್ರಯತ್ನಿಸಲಾಗಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾತ್ರಿಗಳ ಸಹಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


