ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ವೇಳೆ ವ್ಯಾಪಕ ಹಿಂಸಾಚಾರ ನಡೆದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಪಡೆಗಳು ವಿಫಲವಾಗಿವೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.
ಕೂಚ್ ಬೆಹಾರ್ ಜಿಲ್ಲೆಯ ದಿನಾಟಾದಲ್ಲಿ, ಬಾರಾವಿಟಾ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತಪೆಟ್ಟಿಗೆಗಳನ್ನು ಧ್ವಂಸಗೊಳಿಸಿ ಮತಪತ್ರಗಳಿಗೆ ಬೆಂಕಿ ಹಚ್ಚಲಾಯಿತು. ಬಾರ್ನಾಚಿನಾ ಪ್ರದೇಶದ ಮತ್ತೊಂದು ಮತಗಟ್ಟೆಯಲ್ಲಿ ಸ್ಥಳೀಯರು ಫೇಕ್ ಮತದಾನ ಮಾಡಲಾಗಿದೆ ಎಂದು ಆರೋಪಿಸಿ ಮತಯಂತ್ರಗಳ ಜತೆಗೆ ಮತಪೆಟ್ಟಿಗೆಗೆ ಬೆಂಕಿ ಹಚ್ಚಿದ್ದಾರೆ. ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಒತ್ತಾಯಿಸಿ ವಿವಿಧ ಪ್ರದೇಶಗಳಲ್ಲಿ ಪ್ರತಿಭಟನೆಗಳೂ ನಡೆದಿವೆ.
ನಂದಿಗ್ರಾಮದಲ್ಲಿ ಮಹಿಳಾ ಮತದಾರರು ತಮ್ಮ ಕೈಯಲ್ಲಿ ವಿಷದ ಬಾಟಲಿಗಳೊಂದಿಗೆ ಪೊಲೀಸ್ ಅಧಿಕಾರಿಯನ್ನು ಘೇರಾವ್ ಮಾಡಿ, ಪ್ರದೇಶದಲ್ಲಿ ಕೇಂದ್ರ ಪಡೆ ನಿಯೋಜಿಸಬೇಕೆಂದು ಒತ್ತಾಯಿಸಿದರು. ಇದೆಲ್ಲದರ ನಡುವೆ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ಉತ್ತರ 24 ಪರಗಣದ ವಿವಿಧ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ದೂರುಗಳನ್ನು ಆಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


