ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ದೊರೆತಿದ್ದು, ಇದರಿಂದ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು. 10ನೇ ತರಗತಿವರೆಗೆ ಎರಡು ಮೊಟ್ಟೆ ನೀಡುವ ಕಾರ್ಯಕ್ರಮದಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳಣಿಗೆಗೆ ಸಹಕಾರಿಯಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಬ್ಯಾಗ್ ಮತ್ತು ಸೈಟರ್ ವಿತರಣೆಸಚಿವ ರಾಮಲಿಂಗಾರೆಡ್ಡಿ ಪ್ರತಿನಿಧಿಸುವ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳನ್ನು ಮೀರಿಸುವಂತೆ ಮಾಡಿರುವ ಅಭಿವೃದ್ಧಿ ಚಟುವಟಿಕೆಯನ್ನು ವೀಕ್ಷಿಸಿದ ನಂತರ ಆಡುಗೋಡಿ ಸರ್ಕಾರಿ ಶಾಲೆಯಲ್ಲಿ 22 ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಬ್ಯಾಗ್ ಮತ್ತು ಸೈಟರ್‌ಗಳನ್ನು ವಿತರಿಸಿ ದಾನಿಗಳನ್ನು ಸನ್ಮಾನಿಸಿ ಮಾತನಾಡಿದ ಮಧು ಬಂಗಾರಪ್ಪ, 8ನೇ ತರಗತಿವರೆಗಿನ ಮಕ್ಕಳಿಗೆ ಒಂದು ಮೊಟ್ಟೆ ನೀಡಲಾಗುತ್ತಿತ್ತು.
ಇದೀಗ ಪ್ರೌಢ ಶಾಲೆಗೂ ಈ ಯೋಜನೆ ವಿಸ್ತರಿಸಿ ಎರಡು ಮೊಟ್ಟೆ ವಿತರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಸದೃಢವಾದ ದೇಹ ಇದ್ದರೆ ಸದೃಢವಾದ ಮನಸ್ಸು ಇರುತ್ತದೆ ಎಂಬುದನ್ನು ಮನಗಂಡು ಮುಖ್ಯಮಂತ್ರಿಗಳು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎಂದರು. ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಎಲ್ಲವನ್ನೂ ಸರ್ಕಾರವೇ ಮಾಡಲು ಸಾಧ್ಯವಿಲ್ಲ:
ರಾಜ್ಯದಲ್ಲಿ 80 ಸಾವಿರಕ್ಕೂ ಅಧಿಕ ಶಾಲೆಗಳಿದ್ದು, ಎಲ್ಲವನ್ನೂ ಸರ್ಕಾರವೇ ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ. ದಾನಿಗಳು, ಸಿ. ಎಸ್. ಆರ್ ವಲಯದಿಂದ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನೆರವು ಹರಿದು ಬರಬೇಕು. ಈ ನಿಟ್ಟಿನಲ್ಲಿ ಸಚಿವ ರಾಮಲಿಂಗಾರೆಡ್ಡಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಮಕ್ಕಳ ಭವಿಷ್ಯಕ್ಕಾಗಿ ಹೆಚ್ಚು ಶ್ರಮಪಟ್ಟಿದ್ದಾರೆ. ಶಿಕ್ಷಣ ಸಚಿವರಾಗಿ ತಾವು ಗ್ರಾಮೀಣ ಮಟ್ಟದಲ್ಲೂ ಉತ್ತಮ ವಾತಾವರಣ ಕಲ್ಪಿಸಲು ಪ್ರಯತ್ನಿಸುತ್ತೇನೆ. ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಯಾಗಿ ಪರಿವರ್ತಿಸುತ್ತೇನೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


